ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ: ಪೂರ್ವಭಾವಿ ಸಭೆ

1 min read

ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

Tumkurnews
ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಅಕ್ಟೋಬರ್ 6, 7 ಮತ್ತು 8 ರಂದು ನಗರದಲ್ಲಿ ಆಯೋಜನೆ ಮಾಡಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ರಾಜ್ಯದಿಂದ ಸುಮಾರು 6000 ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರೆಲ್ಲರಿಗೂ ಊಟ ಮತ್ತು ವಸತಿಯನ್ನು ವ್ಯವಸ್ಥಿತವಾಗಿ ಮಾಡುವುದಕ್ಕೆ ಕ್ರಮ ವಹಿಸಬೇಕೆಂದು ಹೇಳಿದರು.
ಉದ್ಘಾಟನಾ ಕಾರ್ಯಕ್ರಮಕ್ಕೆ ಕ್ರೀಡೆಯಲ್ಲಿ ಸಾಧನೆ ಮಾಡಿರುವ ರಾಜ್ಯದ ಒಬ್ಬ ಸಾಧಕನನ್ನು ಆಹ್ವಾನಿಸಬೇಕು. ಪ್ರತಿ ಜಿಲ್ಲೆಗೆ ಒಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು. ಅವರು ಯಾವುದೇ ಲೋಪದೋಷಗಳು ಆಗದಂತೆ ಕ್ರಮವಹಿಸುತ್ತಾರೆ ಎಂದರು.
ನಗರದ ವಿವಿಧ ಶಾಲಾ- ಕಾಲೇಜು, ವಿಶ್ವವಿದ್ಯಾನಿಲಯದ ಆವರಣಗಳಲ್ಲಿ ಒಟ್ಟು 17 ಕ್ರೀಡೆಗಳನ್ನು ಏರ್ಪಡಿಸಲು ಸ್ಥಳಗಳನ್ನು ನಿಗದಿ ಮಾಡಲಾಗಿದೆ ಎಂದರು.
ಸಭೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎನ್.ನರಸಿಂಹರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತುಮಕೂರು ಜನತೆಗೆ ಪಾಲಿಕೆಯಿಂದ ವಿಶೇಷ ಸೂಚನೆ: ಗಮನಿಸಿ

About The Author

You May Also Like

More From Author

+ There are no comments

Add yours