ತಾಯಿ, ಮಗ ನಾಪತ್ತೆ
Tumkurnews
ತುಮಕೂರು: ದಂಡಿನಶಿವರ ಪೊಲೀಸ್ ಠಾಣೆ ವ್ಯಾಪ್ತಿಯ ತುರುವೇಕೆರೆ ತಾಲ್ಲೂಕು ದಂಡಿನಶಿವರ ಹೋಬಳಿ ಅಕ್ಕಳಸಂದ್ರ ಗ್ರಾಮದಿಂದ ಆಗಸ್ಟ್ 4ರಂದು ಮಧ್ಯಾಹ್ನ 12 ಗಂಟೆಯಿಂದ ಮಂಗಳಮ್ಮ ಎಂಬ ಸುಮಾರು 45 ವರ್ಷದ ಮಹಿಳೆಯು ತನ್ನ 12 ವರ್ಷದ ಮಗ ರಿಷಿತ್‍ನೊಂದಿಗೆ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ.
ಕಾಣೆಯಾದ ಮಹಿಳೆಯು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ಕಪ್ಪು ಬಣ್ಣವುಳ್ಳವಳಾಗಿದ್ದು, ಸ್ವಲ್ಪ ಬುದ್ಧಿಮಾಂದ್ಯ ಆಗಿರುತ್ತಾಳೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಚೂಡಿದಾರ್ ಧರಿಸಿದ್ದಳು.
ಕಾಣೆಯಾದ ರಿಷಿತ್ 3.5 ಅಡಿ ಎತ್ತರ, ದೃಢಕಾಯ ಶರೀರ, ಎಣ್ಣೆಗೆಂಪು ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಈತನು ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಟೀ ಷರ್ಟ್ ಧರಿಸಿದ್ದನು.
ಇವರ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಮನವಿ ಮಾಡಿದ್ದಾರೆ.
+ There are no comments
Add yours