ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್
Tumkurnews
ತುಮಕೂರು: ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
18 ವರ್ಷ ತುಂಬಿದೆಯೇ? ತೆಂಗು ಉದ್ದಿಮೆ ಆರಂಭಿಸಿ, ಪಡೆಯಿರಿ 15 ಲಕ್ಷ ರೂ.ವರೆಗೆ ಸಹಾಯ ಧನ!
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾಜ್ಯ ಮಟ್ಟದಲ್ಲಿ ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ, ವಿದ್ಯಾಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂವಿಧಾನ ಪೀಠಿಕೆ ಓದಲು ನೋಂದಣಿ ಮಾಡಿಸುವ ಗುರಿ ನಿಗದಿಪಡಿಸಿದ್ದು, ಸಕಾಲದಲ್ಲಿ ನೋಂದಣಿ ಕಾರ್ಯ ಸಂಪೂರ್ಣಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮಧುಗಿರಿ V/S ತಿಪಟೂರು ಜಿಲ್ಲಾ ಕೇಂದ್ರ: ಮಹತ್ವದ ಘೋಷಣೆ ಮಾಡಿದ ಸಿಎಂ
ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಇಲಾಖೆಗಳು ಸೇರದಂತೆ ವಿವಿಧ ಸಂಸ್ಥೆ ಹಾಗೂ ಸಾರ್ವಜನಿಕರು ಆನ್‍ಲೈನ್ ಮೂಲಕ ಪಾಲ್ಗೊಳ್ಳಲಿದ್ದು, ಅಂದು ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ http://thepreamble-swdkar.in ವೆಬ್‍ಸೈಟ್ ಮೂಲಕ ನೋಂದಾಯಿಸಿಕೊಂಡು ಪ್ರಜಾಪ್ರಭುತ್ವದ ಅಧಿಕೃತ ಆಚರಣೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಉಪಸ್ಥಿತರಿದ್ದರು.
ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಮನವಿ
+ There are no comments
Add yours