ರಾಜ್ಯದಲ್ಲೇ ಪ್ರಥಮ ತುಮಕೂರಿನಲ್ಲಿ ಅನುಷ್ಠಾನ: ಯಶಸ್ವಿಯಾದರೆ ರಾಜ್ಯಕ್ಕೆ ವಿಸ್ತರಣೆ: ಏನಿದು?

1 min read

 

ರಾಜ್ಯದಲ್ಲೇ ಪ್ರಥಮ ಈ ಯೋಜನೆ: ಯಶಸ್ವಿಯಾದರೆ ರಾಜ್ಯಕ್ಕೆ ವಿಸ್ತರಣೆ

Tumkurnews
ತುಮಕೂರು: ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರದ ಕಿಟ್ ನೀಡಲು ಜಿಲ್ಲಾಡಳಿತ ಮುಂದಾಗಿದ್ದು, ಇದು ರಾಜ್ಯದಲ್ಲಿ ಪ್ರಥಮ ಪ್ರಯೋಗವಾಗಿದೆ. ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದರೆ ಅದನ್ನು ರಾಜ್ಯ ಮಟ್ಟದಲ್ಲಿ ವಿಸ್ತರಿಸಲು ಸರ್ಕಾರಕ್ಕೆ ಜಿಲ್ಲಾಡಳಿತವು ಶಿಫಾರಸು ಮಾಡಲಿದೆ. ಈ ವಿಚಾರಗಳನ್ನು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಸಂವಿಧಾನ ಓದು ಕಾರ್ಯಕ್ರಮ: ಯಾರು ಬೇಕಿದ್ದರೂ ಭಾಗವಹಿಸಬಹುದು: ಇಲ್ಲಿದೆ ಮಾಹಿತಿ
ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಕೂಡಿರುವ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರು ಸೇರಿದಂತೆ ಒಟ್ಟು ಆರು ಸಾವಿರ ಫಲಾನುಭವಿಗಳಿಗೆ ಕೆಎಂಎಫ್ ವತಿಯಿಂದ 3 ತಿಂಗಳು ಬಳಕೆ ಮಾಡುವಷ್ಟು ಪೌಷ್ಟಿಕ ಆಹಾರದ ಕಿಟ್ ಅನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಅನುಷ್ಟಾನ ಮಾಡಲಾಗುವುದು. ಯಶಸ್ವಿಯಾದ ನಂತರ ರಾಜ್ಯಕ್ಕೆ ಅನ್ವಯವಾಗುವಂತೆ ಅನುಷ್ಟಾನ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ; ಇಲ್ಲಿದೆ ಕಚೇರಿ ವಿಳಾಸ
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours