ತುಮಕೂರು ಜಿಲ್ಲೆಯ ಬರಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆ
Tumkurnews
ತುಮಕೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಉಂಟಾಗಿದ್ದು, ಬರ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.
ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ. ಈ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ತಾಲ್ಲೂಕು ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರ ಪೀಡಿತ ತಾಲ್ಲೂಕು ಎಂದು ಘೋಷಿಸಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ಒಟ್ಟು 10 ತಾಲ್ಲೂಕುಗಳ ಪೈಕಿ 9 ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಗುರುತಿಸಿದೆ. ಒಂದೇ ಜಿಲ್ಲೆ, ಒಂದೇ ಊರಿನಲ್ಲಿ ಐಎಎಸ್, ಐಪಿಎಸ್ ಜೋಡಿ! ಮಾಡಿದೆ ಮೋಡಿ
ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತಿಪಟೂರು ಹಾಗೂ ತುರುವೇಕೆರೆ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಗುರುತಿಸಲಾಗಿದೆ. ತುಮಕೂರು ತಾಲ್ಲೂಕನ್ನು ಸಾಧಾರಣ ಬರ ಪೀಡಿತ ತಾಲ್ಲೂಕು ಎಂದು ಪಟ್ಟಿ ಮಾಡಿ ಸರ್ಕಾರ ಆದೇಶಿಸಿದ್ದು, ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/NDRF ನಿಯಮಗಳ ನದಿಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ ಹಾಗೂ ನೋಂ ಮತ್ತು ಮು) ಸರ್ಕಾರದ ಜಂಟಿ ಕಾರ್ಯದರ್ಶಿ ಟಿ.ಸಿ ಕಾಂತರಾಜ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ತಬಸುಮ್ ಜಹೇರಾಗೆ ಜೈಲು ಶಿಕ್ಷೆ: ಯಾಕೆ? ಏನಾಯ್ತು?
+ There are no comments
Add yours