ಎರಡು ಬಸ್’ಗಳ ನಡುವೆ ಸಿಲುಕಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವು
Tumkurnews
ತುಮಕೂರು: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಎರಡು ಬಸ್’ಗಳ ನಡುವೆ ಸಿಲುಕಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ(60) ಹಾಗೂ ಪಂಕಜ(55) ಮೃತ ದುರ್ದೈವಿಗಳು.
ಮೃತ ಮಹಿಳೆಯರು ತಮ್ಮ ನೆರೆಹೊರೆಯವರೊಂದಿಗೆ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿ ಲಕ್ಷ್ಮಿ ದೇವಾಲಯಕ್ಕೆ ಹೊರಟ್ಟಿದ್ದರು.
ಶುಕ್ರವಾರ ಬೆಳಗ್ಗೆ ನಗರದ ಬಸ್ ನಿಲ್ದಾಣದಲ್ಲಿ ಕೊರಟಗೆರೆಯ ಬಸ್ ಹತ್ತಲು ಮುಂದಾದಾಗ ಗೌರಿ ಬಿದನೂರು ಮತ್ತು ಕೊರಟಗೆರೆಯ ಬಸ್’ಗಳ ನಡುವೆ ಸಿಲುಕಿಕೊಂಡು ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೇವರ ದರ್ಶನಕ್ಕೆ ಬಂದಿದ್ದರು: ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಲವು ಮಹಿಳೆಯರು ಧಾರ್ಮಿಕ ಕ್ಷೇತ್ರಗಳ ದರ್ಶನಕ್ಕೆಂದು ಬಂದಿದ್ದರು. ಅದರಂತೆ ಇಂದು ಗೊರವನಹಳ್ಳಿಗೆ ಹೊರಟಿದ್ದರು. ಆದರೆ ದುರಾದೃಷ್ಟವಶಾತ್ ಬಸ್ ಹತ್ತುವ ಪೈಪೋಟಿಯಲ್ಲಿ ಎರಡು ಬಸ್’ಗಳ ನಡುವೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಹಾಗೂ ಕೆ.ಎಸ್.ಆರ್.ಆರ್.ಟಿ.ಸಿ ಅಧಿಕಾರಿಗಳು ಭೇಟಿ ನೀಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.
+ There are no comments
Add yours