ರಾಜ್ಯದಲ್ಲಿ ತೀವ್ರ ಬರ ಹಿನ್ನೆಲೆಯಲ್ಲಿ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ
Tumkurnews
ತುಮಕೂರು: ಜಿಲ್ಲೆಯಲ್ಲಿ ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರೈತರಿಂದ ಯಾವುದೇ ರೀತಿಯ ಸಾಲ ವಸೂಲಾತಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತಿಪಟೂರು, ತುರುವೇಕೆರೆ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ ತುಮಕೂರು ತಾಲ್ಲೂಕನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ರಾಜ್ಯ ಸರ್ಕಾರವು ಘೋಷಿಸಿದೆ ಎಂದು ತಿಳಿಸಿದರು.
ರಾಜ್ಯದ 195 ತಾಲ್ಲೂಕುಗಳಲ್ಲಿ ಬರ: ಇಲ್ಲಿದೆ ತುಮಕೂರು ಜಿಲ್ಲೆಯ ಲಿಸ್ಟ್
ಜಿಲ್ಲೆಯಲ್ಲಿ ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕುಗಳಾಗಲಿ, ಸಂಘಸಂಸ್ಥೆ ಅಥವಾ ಲೇವಾದೇವಿದಾರರಾಗಲಿ ರೈತರಿಂದ ಯಾವುದೇ ರೀತಿಯ ಸಾಲ ವಸೂಲಿಯನ್ನು ಸದ್ಯಕ್ಕೆ ಮಾಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ರೈತರು ಬರ ಬಂದಿದೆ ಎಂದು ಯಾರೂ ಎದೆಗುಂದದೆ ತಮ್ಮ ಸಮಸ್ಯೆಗಳನ್ನು ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಗಮನಕ್ಕೆ ತಂದರೆ, ರೈತರಿಗೆ ಸಹಕಾರ ನೀಡಲು ಸದಾ ಸಿದ್ಧರಾಗಿರುತ್ತೇವೆ ಎಂದು ಭರವಸೆ ನೀಡಿದರು.
ಇಬ್ಬರ ಬಲಿ ಪಡೆದ ಫ್ರೀ ಬಸ್: ಗೊರವನಹಳ್ಳಿ ಲಕ್ಷ್ಮಿಗೆ ಬಂದವರ ಸಾವು: ವಿಡಿಯೋ
+ There are no comments
Add yours