ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 2454 ಹೊಸ ಹುದ್ದೆ ಮಂಜೂರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪೊಲೀಸ್ ಇಲಾಖೆಗೆ ಸೇರಬೇಕು ಎಂಬ ಆಸೆ ಇರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹೊಸದಾಗಿ ಹುದ್ದೆಗಳನ್ನು ಮಂಜೂರು ಮಾಡಿದೆ. ಇದು ಪೊಲೀಸ್ ಹುದ್ದೆ ಆಕಾಂಕ್ಷಿಗಳಲ್ಲಿ ತೀವ್ರ ಸಂತಸಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ತೀವ್ರ ಬರ: ಸಾಲ ವಸೂಲಾತಿಗೆ ತಡೆ
ಬೆಂಗಳೂರು ಪೊಲೀಸ್ ಕಮಿಷನರೇಟ್’ಗೆ ಸೀಮಿತವಾಗಿ ವಿವಿಧ ಹಂತಗಳಲ್ಲಿ ಒಟ್ಟು 2,454 ಹುದ್ದೆಗಳನ್ನು ಮಂಜೂರು ಮಾಡಿ ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಸಿಸಿಬಿಯನ್ನು ಬಲ ಪಡಿಸಲು ಹೊಸದಾಗಿ 230 ಹುದ್ದೆಗಳನ್ನು ಮಂಜೂರು ಮಾಡುವುದಾಗಿ ಇದೇ ವೇಳಿ ಸಿದ್ದರಾಮಯ್ಯ ಹೇಳಿದರು.
ಇಬ್ಬರ ಬಲಿ ಪಡೆದ ಫ್ರೀ ಬಸ್: ಗೊರವನಹಳ್ಳಿ ಲಕ್ಷ್ಮಿಗೆ ಬಂದವರ ಸಾವು: ವಿಡಿಯೋ
+ There are no comments
Add yours