ಸೆ.24ರಂದು ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ
Tumakurunews
ತುಮಕೂರು: ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 24, 2023ರಂದು ಎಂಬಿಎ ಮತ್ತು ಎಂಸಿಎ ಕೋರ್ಸ್’ಗಳಿಗೆ ಪ್ರವೇಶಕ್ಕೆ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆ(ಪಿಜಿಸಿಇಟಿ) ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.
ನಿಷೇಧಾಜ್ಞೆಯು ಸೆಪ್ಟೆಂಬರ್ 24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ತುಮಕೂರು: ಬರ ನಿರ್ವಹಣೆಗೆ ಜಿಲ್ಲಾಡಳಿತದ ಸಿದ್ಧತೆಗಳೇನು? ಡಿಸಿ ಮಾಹಿತಿ
+ There are no comments
Add yours