ಕೃಷಿ ಅಧಿಕಾರಿಗಳ ದಾಳಿ: ಎಸ್ಓಪಿ ರಸಗೊಬ್ಬರ ವಶ
Tumkurnews
ತುಮಕೂರು: ಎಸ್‌ಓಪಿ (ನೇರ ಪೋಟಾಷಿಯಂ ಯುಕ್ತ) ರಸಗೊಬ್ಬರವನ್ನು ಶೇ.100 ರಷ್ಟು ನೀರಿನಲ್ಲಿ ಕರಗುವ ರಸಗೊಬ್ಬರ ಎಂದು ಲೇಬಲ್ ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಜಾರಿದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ.
ಸೆ.24ರಂದು ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ
ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿಯ ಹೊಸಕೆರೆ ಗ್ರಾಮದಲ್ಲಿರುವ ಧನ್ವಿತ್ ಫರ್ಟಿಲೈಸರ್ಸ್ ಅಂಗಡಿಯಲ್ಲಿ ಅಕ್ರಮವಾಗಿ ಎಸ್ಓಪಿ ರಸಗೊಬ್ಬರವನ್ನು ಶೇ.100 ರಷ್ಟು ನೀರಿನಲ್ಲಿ ಕರಗುವ ರಸಗೊಬ್ಬರವೆಂದು ಲೇಬಲ್ ಮಾಡಿ ದಾಸ್ತಾನು ಮಾಡಿ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ದೂರುಗಳು ಕೇಳಿದ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.
ದಾಳಿ ಮಾಡಿದ ವೇಳೆ 13750 ರೂ. ಬೆಲೆಯ 150 ಕೆ.ಜಿ. ಎಸ್ಓಪಿ ರಸಗೊಬ್ಬರವನ್ನು ಅಂಗಡಿಯಲ್ಲಿ ದಾಸ್ತಾನು ಮಾಡಿ ಮಾರಾಟ ಮಾಡಲಾಗುತ್ತಿತ್ತು. ಅಂಗಡಿಯಲ್ಲಿದ್ದ ಉಳಿಕೆ 108 ಕೆ.ಜಿ. ರಸಗೊಬ್ಬರವನ್ನು ಮಾರಾಟ ಮಾಡದಂತೆ ಆದೇಶ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಮಧುಗಿರಿ ಏಕೆ ಜಿಲ್ಲೆಯಾಗಬೇಕು? ಇಲ್ಲಿವೆ 10 ಕಾರಣಗಳು: ಓದಿ
ಸದರಿ ಅಂಗಡಿಯವರಿಗೆ ಉತ್ಪಾದನೆ ಪರವಾನಗಿ ಪತ್ರಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿ, ಮಾದರಿಯನ್ನು ಪಡೆದು ವಿಶ್ಲೇಷಣೆಗೆ ಕಳುಹಿಸಿಕೊಡಲಾಗಿದೆ. ಆದರೆ ರಸಗೊಬ್ಬರ ಮಾರಾಟಗಾರರು ಮತ್ತು ಸರಬರಾಜುದಾರರು ಸೂಕ್ತ ದಾಖಲಾತಿಗಳನ್ನು ಸಲ್ಲಿಸದೇ ಇರುವ ಕಾರಣ ಗುಣನಿಯಂತ್ರಣ ವಿಶ್ಲೇಷಣೆಯಲ್ಲಿ ಕಳಪೆ ಎಂದು ವರದಿಯಾಗಿದೆ. ಹಾಗಾಗಿ ಸದರಿ ಅಂಗಡಿಯವರು ನಿಯಮವನ್ನು ಉಲ್ಲಂಘಿಸಿದ್ದರಿಂದ 106 ಕೆ.ಜಿ. ರಸಗೊಬ್ಬರವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೃಷಿ ಇಲಾಖೆ ಜಾರಿದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಮಿಡಿಗೇಶಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಎನ್. ಸುನೀಲ್‌ಕುಮಾರ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಮಧುಗಿರಿ V/S ತಿಪಟೂರು ಜಿಲ್ಲಾ ಕೇಂದ್ರ: ಮಹತ್ವದ ಘೋಷಣೆ ಮಾಡಿದ ಸಿಎಂ
+ There are no comments
Add yours