ಗೃಹ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’: ದಿನಾಂಕ ನಿಗದಿ

1 min read

 

ಗೃಹ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮ

Tumakurunews
ತುಮಕೂರು: ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25, 2023ರಂದು ಬೆಳಿಗ್ಗೆ 11 ಗಂಟೆಯಿಂದ ‘ಗಾಜಿನ ಮನೆ ಅಮಾನಿಕೆರೆ’ ಪಾರ್ಕ್ ತುಮಕೂರು ಇಲ್ಲಿ ‘ಜನತಾ ದರ್ಶನ ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭ: ಏನಿದರ ಉಪಯೋಗ?
ಜನತಾ ದರ್ಶನ ನಡೆಯುವ ಮುನ್ನ ಅಂದರೆ, 20-9-2023 ರಿಂದ ದಿನಾಂಕ: 22-9-2023ರವರೆಗೆ ಒಟ್ಟು 3 ದಿನಗಳು ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಲು ಕಂಪ್ಯೂಟರ್ ಕೌಂಟರ್’ಗಳೊಂದಿಗೆ ಹಾಜರಿದ್ದು, ಅರ್ಜಿಗಳನ್ನು ಸ್ವೀಕರಿಸಿ ಸೆಪ್ಟೆಂಬರ್ 25, 2023ರಂದು ನಡೆಯುವ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಪರಿಹಾರ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಕಾರ್ಯಕ್ರಮಕ್ಕೆ ಹಾಜರಾಗಿ ಜನತಾ ದರ್ಶನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಅರ್ಜಿಗಳನ್ನು ಸಂಬಂಧಿಸಿದ ಇಲಾಖಾ ಕೌಂಟರ್‍’ಗಳಲ್ಲಿ ನೀಡಿ ಸ್ವೀಕೃತಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಸೆ.24ರಂದು ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ
ಸೆಪ್ಟೆಂಬರ್ 25, 2023ರಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆಯುವ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಶಾಸಕರುಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ತಾಲ್ಲೂಕು ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತುಮಕೂರು: ಬರ‌ ನಿರ್ವಹಣೆಗೆ ಜಿಲ್ಲಾಡಳಿತದ ಸಿದ್ಧತೆಗಳೇನು? ಡಿಸಿ ಮಾಹಿತಿ

About The Author

You May Also Like

More From Author

+ There are no comments

Add yours