ಕೊಬ್ಬರಿ ಬೆಂಬಲ ಬೆಲೆ ವಿಚಾರ: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಡಳಿತದ ನಿರ್ಧಾರ

1 min read

ಬೆಂಬಲಬೆಲೆ ಖರೀದಿ ಅವಧಿಯನ್ನು ಮುಂದುವರೆಸಲು ಸರ್ಕಾರಕ್ಕೆ ಪ್ರಸ್ತಾವನೆ

Tumkurnews
ತುಮಕೂರು: ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ಮಾಡುವ ಅವಧಿಯನ್ನು ಮುಂದುವರೆಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ 2023-24ನೇ ಸಾಲಿನಲ್ಲಿ ಕನಿಷ್ಟ ಬೆಂಬಲ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ಬಗ್ಗೆ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಪ್ರಸ್ತುತ ಬರಗಾಲ ಘೋಷಣೆಯಾಗಿದ್ದು, ಬೆಂಬಲಬೆಲೆ ಖರೀದಿ ಅವಧಿ ಮುಕ್ತಾಯಗೊಂಡಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಜಿಲ್ಲೆಯಲ್ಲಿ ತೆಂಗು ಆಯ್ಕೆಯಾಗಿರುವುದರಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಡಾ. ಬಿ.ರಾಜಣ್ಣ, ಕೃಷಿ ಜಂಟಿ ನಿರ್ದೇಶಕ ಹೆಚ್.ಎನ್.ರಮೇಶ್ ಸೇರಿದಂತೆ ಎಪಿಎಂಸಿ, ತೋಟಗಾರಿಕೆ, ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿ-ಜೆಡಿಎಸ್ ಮೈತ್ರಿ: ತುಮಕೂರಿನಲ್ಲಿ ಆರಂಭದಲ್ಲೇ ಅಪಸ್ವರ: ದೇವೇಗೌಡರ ಸ್ಪರ್ಧೆಗೆ ವಿರೋಧ

ಉಂಡೆ ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ ಪಡಿಸಿದ ಕೇಂದ್ರ; ಖರೀದಿಗೆ ದಿನ ನಿಗದಿ

About The Author

You May Also Like

More From Author

+ There are no comments

Add yours