ಕರ್ನಾಟಕ ಬಂದ್’ಗೆ ತುಮಕೂರಿನಲ್ಲಿ ಬೆಂಬಲ: ಕನ್ನಡ ಪರ ಸಂಘಟನೆಗಳ ಒಕ್ಕೂಟ
Tumkurnews
ತುಮಕೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಸೆಪ್ಟೆಂಬರ್ 29ರ ಕರ್ನಾಟಕ ಬಂದ್’ಗೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದೆ.
ಜಿಲ್ಲೆಯ ಕನ್ನಡ ಪರ ಸಂಘಟನೆಗಳ ಮುಖಂಡರು ನಗರದಲ್ಲಿ ಬುಧವಾರ ಈ ಕುರಿತು ಸಭೆ ನಡೆಸಿದ್ದು, ಶುಕ್ರವಾರ ಬಂದ್ ಆಚರಿಸುವ ಮೂಲಕ ತಮಿಳು ನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಲು ನಿರ್ಣಯ ಕೈಗೊಳ್ಳಲಾಯಿತು.
ಈ ಕುರಿತು ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾ ಕುಮಾರ್, ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಲು ನಮ್ಮ ವಿರೋಧವಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29ರಂದು ಬಂದ್’ಗೆ ಬೆಂಬಲ ಸೂಚಿಸಲಾಗುತ್ತಿದೆ. ಬಲವಂತದ ಬಂದ್ ನಡೆಸುವುದಿಲ್ಲ. ಹೋರಾಟಗಾರರು ಟೌನ್ ಹಾಲ್’ನಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಔಷಧಿ, ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಉಳಿದ ವ್ಯಾಪಾರ ವಹಿವಾಟು ನಡೆಸುವವರಿಗೆ ಬಂದ್ ಬೆಂಬಲಿಸುವಂತೆ ಮನವಿ ಮಾಡಲಾಗುವುದು. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಗಳ ವರೆಗೆ ಬಂದ್ ಆಚರಣೆ ನಡೆಯಲಿದೆ ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ: ತುಮಕೂರಿನಲ್ಲಿ ಆರಂಭದಲ್ಲೇ ಅಪಸ್ವರ: ದೇವೇಗೌಡರ ಸ್ಪರ್ಧೆಗೆ ವಿರೋಧ
+ There are no comments
Add yours