ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ

1 min read

 

ಬಡವರ ಸ್ವಂತ ಮನೆ ಕನಸಿಗೆ ರೆಕ್ಕೆ ತುಂಬಿದ ಜಿಲ್ಲಾಡಳಿತ

ಸ್ವಂತ ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಇರುವ ಬಡ ಜನರಿಗೆ ಜಿಲ್ಲಾಡಳಿತದಿಂದ ಸಿಹಿ ಸುದ್ದಿ ಇದೆ. ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಜಿಲ್ಲಾಡಳಿತ ಮುಂದಾಗಿದೆ.
Tumkurnews
ತುಮಕೂರು: ಜಿಲ್ಲೆಯಲ್ಲಿ ಆಶ್ರಯ ಯೋಜನೆಗೆ 761 ಎಕರೆ ಜಾಗವನ್ನು ಗುರುತಿಸಿ ಸರ್ವೇಯನ್ನು ಮಾಡಲಾಗಿದ್ದು, ಈ ಜಾಗವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ತಮ್ಮ ಸುಪರ್ದಿಗೆ ತೆಗೆದುಕೊಂಡು ನರೇಗಾ ಯೋಜನೆಯ ಅನುದಾನವನ್ನು ಬಳಸಿಕೊಂಡು ವಸತಿ ಬಡಾವಣೆ ನಿರ್ಮಾಣ ಮಾಡುವುದಕ್ಕೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಕಾರ್ಯಕ್ರಮಕ್ಕೆ ಅಕ್ಟೋಬರ್ 2ರಂದು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ನಿವೇಶನ ರಹಿತರಿಗೆ ನಿವೇಶನಗಳನ್ನು ಕೊಟ್ಟರೆ ಅವರು ಸರ್ಕಾರದ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರದಿಂದ 2ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಉದ್ಯಾನವನ ನಿರ್ಮಿಸಲು ಕಂದಾಯ ನಿರೀಕ್ಷಕರುಗಳು ಜಾಗವನ್ನು ಗುರುತಿಸಬೇಕು. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉದ್ಯಾನವನನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಪ್ರತಿನಿತ್ಯ ವಾಯು ವಿಹಾರಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ: ತುಮಕೂರಿನಲ್ಲಿ ಆರಂಭದಲ್ಲೇ ಅಪಸ್ವರ: ದೇವೇಗೌಡರ ಸ್ಪರ್ಧೆಗೆ ವಿರೋಧ

About The Author

You May Also Like

More From Author

+ There are no comments

Add yours