ಕರ್ನಾಟಕ ಬಂದ್: ಶಾಲಾ ಕಾಲೇಜುಗಳಲ್ಲಿ ರಜೆ ಇಲ್ಲ
Tumkurnews
ತುಮಕೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಸೆಪ್ಟೆಂಬರ್ 29ರಂದು ತುಮಕೂರು ಜಿಲ್ಲೆಯ ಯಾವುದೇ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಬಸ್ ಸಂಚಾರ ಎಂದಿನಂತೆ ಇರುತ್ತದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು “ತುಮಕೂರು ನ್ಯೂಸ್”ಗೆ ತಿಳಿಸಿದ್ದಾರೆ.
ಕರ್ನಾಟಕ ಬಂದ್’ಗೆ ತುಮಕೂರಿನಲ್ಲಿ ಯಾರ್ಯಾರ ಬೆಂಬಲ?: ಹೇಗಿರುತ್ತೆ ಬಂದ್? ಇಲ್ಲಿದೆ ಮಾಹಿತಿ
ಕೆಲವು ಖಾಸಗಿ ಶಾಲಾಕಾಲೇಜುಗಳು ಈಗಾಗಲೇ ರಜೆ ಘೋಷಣೆ ಮಾಡಿದ್ದು, ಭಾನುವಾರ ತರಗತಿ ನಡೆಸುವುದಾಗಿ ಪೋಷಕರಿಗೆ ಮಾಹಿತಿ ನೀಡಿವೆ. ಉಳಿದಂತೆ ಯಾವುದೇ ಸರ್ಕಾರಿ ಶಾಲಾಕಾಲೇಜುಗಳಿಗೆ ರಜೆ ಇರುವುದಿಲ್ಲ.
+ There are no comments
Add yours