ತುಮಕೂರು: ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

1 min read

 

ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

Tumkurnews
ತುಮಕೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206 ಬೆಂಗಳೂರು-ಶಿವಮೊಗ್ಗ ರಸ್ತೆ ಹೆದ್ದಾರಿಯ ಬಿದರೆಗುಡಿಯ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಬೈಕ್ ಸವಾರರು ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಹಿಂದಿನಿಂದ ಅತೀ ವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಧನುಷ್ (19) ಹಾಗೂ ಮುತ್ತುರಾಜ್ (19) ಎಂದು ಗುರುತಿಸಲಾಗಿದ್ದು, ಈ ಇಬ್ಬರೂ ಅಯ್ಯನಬಾವಿಯ ಗ್ರಾಮಸ್ಥರಾಗಿದ್ದು, ಕೂಲಿ ಕೆಲಸವನ್ನು ಮಾಡುತ್ತಿದ್ದರು.
ವಿಷಯ ತಿಳಿದು ಹೊನ್ನವಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ರಾಜೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮುಂದೆ ಚಲಿಸುತ್ತಿದ್ದ ವಾಹನ ಯಾವುದೆಂದು ತಿಳಿದು ಬಂದಿರುವುದಿಲ್ಲ.

About The Author

You May Also Like

More From Author

+ There are no comments

Add yours