ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ: ವಿದೇಶಕ್ಕೆ ಪರಾರಿ?!

1 min read

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ: ವಿದೇಶಕ್ಕೆ ಪರಾರಿ?!

Tumkurnews
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸರ್ಕಾರ ಎಚ್ಚೆತ್ತುಕೊಂಡಿದ್ದು, ತನಿಖೆಗೆ ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ” ಎಂದಿದ್ದಾರೆ.
“ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.
ಪ್ರಜ್ವಲ್ ಪರಾರಿ: ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ, ಬಂಧನ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಹತ್ತಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳು ವ್ಯಾಪಕವಾಗಿ ವೈರಲ್ ಆಗಿವೆ. ಪ್ರಜ್ವಲ್ ರೇವಣ್ಣ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಮಾಯಕ ಮಹಿಳೆಯರನ್ನು ಬೆದರಿಸಿ, ಪುಸಲಾಯಿಸಿ ತನ್ನ ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ ಎನ್ನಲಾಗಿದ್ದು, ವಿಡಿಯೋಗಳು ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚನೆಗೆ ಮುಂದಾಗಿದೆ.

About The Author

You May Also Like

More From Author

+ There are no comments

Add yours