ದತ್ತಪೀಠದಲ್ಲಿ ಪ್ರವಾಸಿ ಬಸ್‌ ಪಲ್ಟಿ: ತುಮಕೂರಿನ ಬಾಲಕ ಸಾವು

1 min read

 

ದತ್ತಪೀಠದಲ್ಲಿ ಪ್ರವಾಸಿ ಬಸ್‌ ಪಲ್ಟಿ: ತುಮಕೂರಿನ ಬಾಲಕ ಸಾವು

Tumkurnews
ಚಿಕ್ಕಮಗಳೂರು: ಇಲ್ಲಿನ ದತ್ತಪೀಠದಲ್ಲಿ ಪ್ರವಾಸಿ ಬಸ್‌ ಪಲ್ಟಿಯಾಗಿ ತುಮಕೂರು ‌ಜಿಲ್ಲೆಯ ಓರ್ವ ಬಾಲಕ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ 100 ಅಡಿ ಕೆಳಕ್ಕೆ ಉರುಳಿ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಸವಾಜ್ (6) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಬಂದಿದ್ದ ಪ್ರವಾಸಿಗರ ಬಸ್ ಅಪಘಾತಕ್ಕೀಡಾಗಿದೆ. ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ಇವರಿದ್ದ ಬಸ್, ದತ್ತಪೀಠ, ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಬಸ್ಸಿನಲ್ಲಿದ್ದ 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆರು ಮಂದಿ ಗಂಭೀರ ಗಾಯವಾಗಿ ಗಾಯಗೊಂಡಿದ್ದಾರೆ.

You May Also Like

More From Author

+ There are no comments

Add yours