ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಶಾಲಾ ಕಾಲೇಜುಗಳಿಗೆ ರಜೆ
ಮೈಸೂರು: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನರಾದ ಹಿನ್ನೆಲೆಯಲ್ಲಿ, ನಾಳೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಿ.ಶ್ರೀನಿವಾಸ್ ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೂರ್ವ ನಿಗದಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ ಹಾಗೂ ಅನುದಾನಿತ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ನಾಳೆ(ಏಪ್ರಿಲ್ 30)ರಂದು ರಜೆ ಘೋಷಿಸಲಾಗಿದೆ.
ಮೃತ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.
+ There are no comments
Add yours