ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ

1 min read

 

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ

Tumkurnews
ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಪದವಿ ಕೋರ್ಸ್‌ಗಳಿಗೆ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿವೆ ಎಂದು ಪ್ರಾಂಶುಪಾಲರಾದ ತರುನ್ನುಂ ನಿಖತ್ ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ನಡೆಸಲಾಗುತ್ತಿರುವ ಪದವಿಗಳಿಗೆ ಆನ್‌ಲೈನ್, ಆಫ್‌ಲೈನ್ ಮೂಲಕ ಪ್ರವೇಶಾತಿ ಪಡೆಯಬಹುದು. ಪದವಿ ಶಿಕ್ಷಣದ ವಿವಿಧ ವಿಭಾಗಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎಂ, ಬಿ.ಸಿ.ಎ, ಬಿ.ಎಸ್ಸಿ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿಗಳು ಪ್ರಾರಂಭವಾಗಿವೆ. 2024-25ನೇ ಸಾಲಿನಿಂದ BSc – Pharmaceutical Manufacturing & Quality, BCom – Logistics ಬಿ.ಎ ಪದವಿಯಲ್ಲಿ Geography ವಿಷಯ ಹಾಗೂ ಬಿ.ಎಸ್ಸಿ ಪದವಿಯಲ್ಲಿ Data-Science ವಿಷಯಗಳು ಹೊಸದಾಗಿ ಸೇರ್ಪಡೆಗೊಂಡಿವೆ.
ಪದವಿ ಕೋರ್ಸ್‌ಗೆ ಸೇರ ಬಯಸುವವರು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಈ ಹೊಸ ಪದವಿ ಕೋರ್ಸ್‌ಗಳ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಕಾಲೇಜಿನಿಂದ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9845617878 (ಪ್ರಾಂಶುಪಾಲರು) ಇವರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು.

About The Author

You May Also Like

More From Author

+ There are no comments

Add yours