ರೇವಣ್ಣ ಬಂಧನಕ್ಕೆ ಕ್ಷಣಗಣನೆ, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ; ಪರಮೇಶ್ವರ್ ಹೇಳಿದ್ದೇನು?

1 min read

 

ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ್

Tumkurnews
ಬೆಂಗಳೂರು: ಹಾಸನ ಲೋಕಸಭೆ ಸಂಸದ‌ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಒಬ್ಬರು ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಎಸ್ಐಟಿಯವರು ಒತ್ತಾಯಪೂರ್ವಕವಾಗಿ ಆಕೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂಬ ಆರೋಪ ಯಾರಿಂದಲೂ ಬರ ಬಾರದು. ಹೀಗಾಗಿ ಮ್ಯಾಜಿಸ್ಟ್ರೇಟ್ ಮುಂದೆಯೇ ಹೇಳಿಕೆ ಕೊಡಿಸಲಾಗಿದೆ ಎಂದರು.
ಪ್ರಜ್ವಲ್ ರೇವಣ್ಣಗೆ 41A ಅಡಿಯಲ್ಲಿ
ನೋಟಿಸ್ ಕೂಡಲಾಗಿದೆ. ಪ್ರಜ್ವಲ್ ಪರ ವಕೀಲರು ಕಾಲಾವಕಾಶ ಕೇಳಿದ್ದಾರೆ. ಇದಕ್ಕೆ ಅವಕಾಶವಿಲ್ಲ ಎಂಬುದನ್ನು ತಿಳಿಸಿದ್ದೇವೆ. ರೇವಣ್ಣಗೂ ಕೂಡ 41A ಅಡಿ ನೊಟೀಸ್ ನೀಡಲಾಗಿದೆ. ರೇವಣ್ಣ ಸಹ 24 ಗಂಟೆ ಕಾಲಾವಕಾಶ ಕೇಳಿದ್ದಾರೆ. ಕಾನೂನು ಪ್ರಕಾರ ಮತ್ತೊಂದು ನೊಟೀಸ್ ನೀಡಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು‌.
ಪ್ರಜ್ವಲ್ ರೇವಣ್ಣ ಕುರಿತು ಲುಕ್ ಔಟ್ ನೋಟೀಸ್ ಹೊರಡಿಸಲಾಗಿದೆ.‌ ಎಲ್ಲಾ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಗಳಿಗೆ ಫೋಟೋ ಸಮೇತ ನೊಟೀಸ್ ಕಳುಹಿಸಲಾಗಿದೆ‌‌.‌ ನಿಯಮಾನುಸಾರದ ಪ್ರಕಾರವೇ ಲುಕ್ ಔಟ್ ನೊಟೀಸ್ ನೀಡಿದ್ದೇವೆ. ರೇವಣ್ಣ ಅವರ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿರುವುದು ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ದುಬೈಗೆ ಹೋಗಿರುವುದು ಗೊತ್ತಿಲ್ಲ. ಜರ್ಮನಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಜರ್ಮನಿಯಿಂದ‌ ಕರೆತರಲು ಕೇಂದ್ರದ ನೆರವು ಬೇಕು. ಎರಡನೇ ನೋಟಿಸ್‌ಗೂ ಸ್ಪಂದಿಸದಿದ್ದರೆ ಮುಂದಿನ ತೀರ್ಮಾನ ಏನು ಎಂಬುದನ್ನು ಎಸ್ಐಟಿಯವತು ಕೈಗೊಳ್ಳುತ್ತಾರೆ ಎಂದು ಹೇಳಿದರು.

ಬಂಧನಕ್ಕೆ ಕ್ಷಣಗಣನೆ?: ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಬಂಧನಕ್ಕೆ ಕ್ಷಣಗಣನೆ ಇದ್ದಂತಿದೆ. ಈಗಾಗಲೇ ರೇವಣ್ಣ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಯಾವ ಕ್ಷಣದಲ್ಲಾದರೂ ರೇವಣ್ಣ ಬಂಧನಕ್ಕೊಳಗಾಗಬಹುದು ಎನ್ನಲಾಗಿದೆ.

About The Author

You May Also Like

More From Author

+ There are no comments

Add yours