ಸಾಲಬಾಧೆ: ಒಂದೇ ಗ್ರಾಮದ ಮೂವರು ಮಹಿಳೆಯರು ಆತ್ಮಹತ್ಯೆ
Tumkurnews
ತುಮಕೂರು: ಬಲವಂತದ ಸಾಲ ವಸೂಲಿಗೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ತಾಲ್ಲೂಕಿನಲ್ಲಿ ನಡೆದಿದೆ.
ತಿಪಟೂರು ತಾಲೂಕು ಕಿಬ್ಬನಹಳ್ಳಿ ಹೋಬಳಿಯ ಅರಳಗುಪ್ಪೆ ಗ್ರಾಮದ ನಿವಾಸಿ ಭಾಗ್ಯಮ್ಮ(51) ಕೋಂ ಲೇಟ್.ರಾಮಚಂದ್ರಯ್ಯ ಮೃತ ಮಹಿಳೆ. ಈಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಮೃತ ಮಹಿಳೆಯು ತಿಪಟೂರಿನ ಮೈಕ್ರೋ ಫೈನಾನ್ಸ್ ಕಂಪನಿಯೊಂದರಿಂದ ಸುಮಾರು 5 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಮಹಿಳೆಯ ಇಬ್ಬರು ಗಂಡು ಮಕ್ಕಳು ಅನಾಥರಾಗಿದ್ದಾರೆ.
ಮೂವರು ಬಲಿ: ಜಿಲ್ಲೆಯಲ್ಲಿ ಬಲವಂತದ ಸಾಲ ವಸೂಲಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದ್ದು, ಇದೇ ಗ್ರಾಮದಲ್ಲಿ ಈವರೆಗೆ ಒಟ್ಟು ಮೂವರು ಮಹಿಳೆಯರು ಬಲವಂತದ ಸಾಲ ವಸೂಲಾತಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೈನಾನ್ಸ್ ಕಿರುಕುಳ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗ್ರಾಮದಲ್ಲಿ ಮೂರನೇ ಬಲಿಯಾಗುತ್ತಿದ್ದಂತೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಇದು ಮೂರನೇ ಘಟನೆ. ಇದುವರೆಗೆ ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವು ಬಾರಿ ತಾಲೂಕು ಆಡಳಿತ ಹಾಗೂ ಪೊಲೀಸರ ಗಮನಕ್ಕೆ ತರಲಾಗಿದೆ. ಹೀಗಿದ್ದರೂ ಯಾವುದೇ ಕ್ರಮ ಕೈಗೊಂಡಿದ್ದ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
+ There are no comments
Add yours