ತುಮಕೂರು: KSRTC ಹೊಸ ಬಸ್‌ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಭೇಟಿ: ಇನ್ನೂ ಏನೇನು ಕೆಲಸ ಬಾಕಿ ಇದೆ ಗೊತ್ತೇ?

1 min read

 

ಕೆಎಸ್‍ಆರ್‍ಟಿಸಿ ನೂತನ ಬಸ್ ನಿಲ್ದಾಣ ನಿರ್ಮಾಣ: ತಿಂಗಳಾಂತ್ಯಕ್ಕೆ ಪೂರ್ಣಗೊಳಿಸಲು ಸೂಚನೆ

Tumkurnews
ತುಮಕೂರು: ನಗರದಲ್ಲಿ ನಿರ್ಮಾಣವಾಗಿರುವ ನೂತನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಮೇ ಮಾಹೆ ಅಂತ್ಯಕ್ಕೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಶುಕ್ರವಾರ ಸಂಜೆ ದೇವರಾಜ ಅರಸು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಕೆಎಸ್‍ಆರ್‍ಟಿಸಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತ್ರಿವೇಣಿ ಅವರಿಂದ ಕಾಮಗಾರಿ ಪ್ರಗತಿ ಮಾಹಿತಿ ಪಡೆದರು.

KSRTC ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಯಾವಾಗ?
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಹಗಲಿರುಳು ಕೆಲಸಗಾರರನ್ನು ಪಾಳಿ ಆಧಾರದ ಮೇಲೆ ನಿಯೋಜಿಸಿ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ ತ್ರಿವೇಣಿ, ಲಿಫ್ಟ್ ಕಾರ್ಯಾಚರಣೆ, ಪ್ಲಂಬಿಂಗ್ ಕೆಲಸ, ಮುಂಭಾಗದ ಆವರಣ ಗೋಡೆ, ಶೌಚಾಲಯ, ವಿದ್ಯುತ್ ಸಂಪರ್ಕ, ಫಾಲ್ ಸೀಲಿಂಗ್, ಸೈನ್ ಬೋರ್ಡ್, ಸಿಸಿಟಿವಿ ಕ್ಯಾಮೆರಾ, ಅಗ್ನಿಶಾಮಕ ಯಾಂತ್ರಿಕ ಕೆಲಸ, ಹೊರ ಹೋಗುವ ಹಾಗೂ ಒಳ ಬರುವ ಮಾರ್ಗ ನಿರ್ಮಾಣ, ಲ್ಯಾಂಡ್ ಸ್ಕೇಪಿಂಗ್ ಕೆಲಸ, ಅಂತಿಮ ಕೋಟ್ ಪೇಂಟ್, ರ್ಯಾಂಪ್ ಕೆಲಸ, ಸ್ಟ್ರಕ್ಚರಲ್ ಮೆರುಗು ಕೆಲಸ, ಟಿಸಿ ಪಾಯಿಂಟ್ ಮತ್ತು ಪೊಲೀಸ್ ಚೌಕಿ ನಿರ್ಮಾಣ ಕಾಮಗಾರಿಗಳು ಬಾಕಿ ಇದ್ದು, ಮೇ 30ರೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಎಸ್‍ಆರ್‍ಟಿಸಿ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.

You May Also Like

More From Author

+ There are no comments

Add yours