ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ: ಕೆ.ಇ.ಎ
Tumkurnews
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ( VAO) ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶಿಸಿದೆ.
ಇದೇ ಮೇ 4ರ ವರೆಗೆ ಅರ್ಜಿ ಸಲ್ಲಿಸಲು ಕೊನೆ ಅವಕಾಶ ನೀಡಲಾಗಿತ್ತು. ಸರ್ವರ್ ಸಮಸ್ಯೆಯಿಂದ ಸಾಕಷ್ಟು ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಆಗಿರಲಿಲ್ಲ. ಇದನ್ನು ಮನಗಂಡ ಕೆ.ಇ.ಎ ಇಂದು ಅರ್ಜಿ ಸಲ್ಲಿಸಲು ಅವಕಾಶ ವಿಸ್ತರಣೆ ಮಾಡಿದೆ. ಅದರಂತೆ ಮೇ 15ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸಲು ಮೇ 18ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗೆ ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ: ಇಲ್ಲಿದೆ ಮಾಹಿತಿ
ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗೆ ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ: ಇಲ್ಲಿದೆ ಮಾಹಿತಿ
ಏನಿದು ವಿ.ಎ.ಒ ಹುದ್ದೆ?:
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
+ There are no comments
Add yours