ತುಮಕೂರು: ಕೊರಟಗೆರೆ, ಮಧುಗಿರಿ, ಚಿಕ್ಕನಾಯಕನಹಳ್ಳಿಯಲ್ಲಿ ಮೇವು ಬ್ಯಾಂಕ್ ಆರಂಭ
Tumkurnews
ತುಮಕೂರು: ಜಿಲ್ಲೆಯಲ್ಲಿ ಸೋಮವಾರ ಕೊರಟಗೆರೆ ತಾಲ್ಲೂಕು ಕ್ಯಾಮೇನಹಳಿ, ಮಧುಗಿರಿ ತಾಲೂಕು ಐಡಿ ಹಳ್ಳಿ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಕಾರೇನಹಳ್ಳಿ ಸೇರಿ ಹೊಸದಾಗಿ 3 ಮೇವು ಬ್ಯಾಂಕುಗಳನ್ನು ಪ್ರಾರಂಭಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಜಿ ಗಿರೀಶ್ ಬಾಬು ರೆಡ್ಡಿ ತಿಳಿಸಿದರು.
ಕೊರಟಗೆರೆ ತಾಲ್ಲೂಕು ಕ್ಯಾಮೇನಹಳ್ಳಿ ಹಾಗೂ ಮಧುಗಿರಿ ತಾಲೂಕಿನ ಐಡಿ ಹಳ್ಳಿಯಲ್ಲಿ ಮೇವು ಬ್ಯಾಂಕ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈಗಾಗಲೇ ಜಿಲ್ಲೆಯಲ್ಲಿ ಪ್ರಾರಂಭಿಸಿರುವ ಏಳು ಮೇವು ಬ್ಯಾಂಕುಗಳು ಸೇರಿ ಒಟ್ಟು ಹತ್ತು ಮೇವು ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಅವರು ಕೊರಟಗೆರೆ ತಾಲ್ಲೂಕು ಕ್ಯಾಮೇನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣ ಹಾಗೂ ಮಧುಗಿರಿ ತಾಲೂಕಿನ ಐಡಿ ಹಳ್ಳಿ ಹೋಬಳಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ಮೇವು ಬ್ಯಾಂಕನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರೈತರ ಬೇಡಿಕೆಯಂತೆ ಜಿಲ್ಲಾಧಿಕಾರಿ ನಿರ್ದೇಶನದನ್ವಯ ಈ ಮೇವು ಬ್ಯಾಂಕನ್ನು ಪ್ರಾರಂಭಿಸಲಾಗಿದೆ. ಪ್ರತಿ ಕೆ.ಜಿ. ಮೇವಿಗೆ 2 ರೂ.ನಂತೆ ಒಂದು ಜಾನುವಾರಿಗೆ ದಿನಕ್ಕೆ 6 ಕೆ.ಜಿ.ಯಂತೆ 1 ವಾರಕ್ಕಾಗುವಷ್ಟು ಮೇವನ್ನು ವಿತರಿಸಲಾಗುವುದು. ರೈತರು ಈ ಮೇವು ಬ್ಯಾಂಕಿನ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ: KEA
ಈ ಸಂದರ್ಭದಲ್ಲಿ ಕೊರಟಗೆರೆ ತಹಶಿಲ್ದಾರ್ ಮಂಜುನಾಥ್, ಮಧುಗಿರಿ ತಹಶಿಲ್ದಾರ್ ಸಿಬ್ಗತ್ ಉಲ್ಲಾ ಹಾಗೂ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಚ್.ಎನ್. ನಾಗಭೂಷಣ, ಡಾ. ಸಿದ್ದನಗೌಡ, ಪಶು ವೈದ್ಯಾಧಿಕಾರಿಗಳಾದ ಡಾ. ದತ್ತ, ಡಾ.ರವಿಶಂಕರ್ ಪಾಟೀಲ್ ಹಾಜರಿದ್ದರು.
ಕಾರೇನಹಳ್ಳಿಯಲ್ಲಿ ಮೇವು ಬ್ಯಾಂಕ್: ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಕಾರೇನಹಳ್ಳಿ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿಂದು ಮೇವು ಬ್ಯಾಂಕ್ ಅನ್ನು ತಹಸೀಲ್ದಾರ್ ವಿನಾಯಕ ಸಾಗರ್ ಅವರು ಉದ್ಘಾಟನೆ ಮಾಡಿದರು. ಸಹಾಯಕ ನಿರ್ದೇಶಕ ಡಾ. ಆರ್.ಎಂ. ನಾಗಭೂಷಣ್, ಪಶುವೈದ್ಯಾಧಿಕಾರಿ ಡಾ. ಮಂಜುನಾಥ್, ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ತುಮಕೂರು: 14 ಶಾಲೆಗಳನ್ನು ಅನಧಿಕೃತವೆಂದು ಘೋಷಣೆ
+ There are no comments
Add yours