ತುಮಕೂರು: ಇನ್ನೆರಡು ದಿನಗಳಲ್ಲಿ ರೈತರ ಖಾತೆಗೆ ಹಣ: ಜಿಲ್ಲಾಧಿಕಾರಿ
Tumkurnews
ತುಮಕೂರು: ಜಿಲ್ಲೆಯಲ್ಲಿ ಬರ ಪರಿಹಾರವಾಗಿ ಮೊದಲ ಹಂತದಲ್ಲಿ 1,86,193 ರೈತರಿಗೆ 33.52ಕೋಟಿ ರೂ.ಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
ಈ ಕುರಿತು ಸಭೆಯಲ್ಲಿ ಮಾತನಾಡಿದ ಅವರು,
ಜಿಲ್ಲೆಯಲ್ಲಿ ಬರ ಪರಿಹಾರವಾಗಿ ಮೊದಲ ಹಂತದಲ್ಲಿ 1,86,193 ರೈತರಿಗೆ 33.52ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಎರಡನೇ ಹಂತದಲ್ಲಿ 1,32,332 ರೈತರಿಗೆ 74.21ಕೋಟಿ ರೂ.ಗಳ ಬರ ಪರಿಹಾರ ನೀಡಲು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇನ್ನೆರಡು ದಿನಗಳಲ್ಲಿ 2ನೇ ಹಂತದ ಪರಿಹಾರದ ಹಣ ರೈತರ ಖಾತೆಗೆ ಜಮೆಯಾಗಲಿದೆ ಎಂದರು. ಜಿಲ್ಲೆಯಲ್ಲಿ 39,089 ಪ್ರಕರಣಗಳಲ್ಲಿ ರೈತರು ತಮ್ಮ ಆಧಾರ್ ನಂಬರ್ ಅನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಸದೇ ಇರುವುದರಿಂದ ಹಾಗೂ ಬ್ಯಾಂಕ್ ಖಾತೆ ಸಕ್ರಿಯವಾಗಿರದ ಕಾರಣ ನೇರವಾಗಿ ರೈತರ ಖಾತೆಗೆ ಪರಿಹಾರವನ್ನು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ನ್ಯೂನ್ಯತೆಗಳನ್ನು ಸರಿಪಡಿಪಡಿಸಿಕೊಳ್ಳುವ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಕಂದಾಯ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದರು.
ತುಮಕೂರು: ರೈತರಿಂದ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ ಆದೇಶ
+ There are no comments
Add yours