ತುಮಕೂರು: ರೈತರಿಂದ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ ಆದೇಶ

1 min read

ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ: ಡೀಸಿ ಸೂಚನೆ

Tumkurnews
ತುಮಕೂರು: ಬರ ಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿ, ಖಾಸಗಿ ಲೇವಾದೇವಿಗಾರರು ಹಾಗೂ ಸಾಲದಾತರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ರಾತ್ರಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಮಳೆ ಬಾರದೆ ಈಗಾಗಲೇ ರೈತರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಿಂದ ಹೊರಬರಲು ಮಾಡಿರುವ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಬೆಳೆಯಿಲ್ಲದೆ ಕಂಗೆಟ್ಟಿರುವ ಇಂತಹ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ಯಾವುದೇ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಕಿರುಕುಳ ನೀಡಬಾರದು. ಸಾಲ ವಸೂಲಿಗಾಗಿ ರೈತರಿಗೆ ತೊಂದರೆ ಕೊಡುವುದು ಕಂಡು ಬಂದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

About The Author

You May Also Like

More From Author

+ There are no comments

Add yours