ಎಚ್.ಡಿ ರೇವಣ್ಣಗೆ ಮೇ 14ರ ವರೆಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ತಲುಪಿದ ಮಾಜಿ ಪ್ರಧಾನಿ ಪುತ್ರ
Tumkurnews
ಬೆಂಗಳೂರು: ಮಾಜಿ ಸಚಿವ ಎಚ್.ಡಿ ರೇವಣ್ಣ ಅವರನ್ನು ಮೇ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಬುಧವಾರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ ರೇವಣ್ಣ ಅವರನ್ನು ಎಸ್.ಐ.ಟಿ ಪೊಲೀಸರು ವಶಕ್ಕೆ ಪಡೆದಿದ್ದರು. ಎಸ್.ಐ.ಟಿ ವಿಚಾರಣೆ ಬಳಿಕ ಬುಧವಾರ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಎಸ್. ಐ.ಟಿ ಪೊಲೀಸರು ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ತಲುಪಿಸಿದ್ದಾರೆ.
ಎಚ್.ಡಿ ರೇವಣ್ಣ ಬಂಧನ! ನಿಜವಾಯ್ತು ‘ತುಮಕೂರು ನ್ಯೂಸ್’ ವರದಿ!!
+ There are no comments
Add yours