ತುಮಕೂರು: ಇನ್ನೆರಡು ದಿನಗಳ ಒಳಗೆ ಜಲಮೂಲಗಳನ್ನು ಸ್ವಚ್ಛಗೊಳಿಸಿ: ಜಿಪಂ ಸಿಇಒ

1 min read

 

ಇನ್ನೆರಡು ದಿನಗಳ ಒಳಗೆ ಜಲಮೂಲಗಳನ್ನು ಸ್ವಚ್ಛಗೊಳಿಸಿ:

Tumkurnews
ತುಮಕೂರು: ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್, ಜಲಸಂಗ್ರಹಗಾರ ಸೇರಿದಂತೆ ಕುಡಿಯುವ ನೀರು ಪೂರೈಕೆ ಮಾಡುವ ಎಲ್ಲಾ ಜಲಮೂಲಗಳನ್ನು ಇನ್ನೆರಡು ದಿನದೊಳಗಾಗಿ ಸ್ವಚ್ಛಗೊಳಿಸಬೇಕು ಎಂದು
ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು ಸೂಚಿಸಿದರು.
ಈ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶಗಳಲ್ಲಿ ಕಲುಷಿತ ನೀರು ಪೂರೈಕೆ ಆಗುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್, ಜಲಸಂಗ್ರಹಗಾರ ಸೇರಿದಂತೆ ಕುಡಿಯುವ ನೀರು ಪೂರೈಕೆ ಮಾಡುವ ಎಲ್ಲಾ ಜಲಮೂಲಗಳನ್ನು ಇನ್ನೆರಡು ದಿನದೊಳಗಾಗಿ ಸ್ವಚ್ಛಗೊಳಿಸಬೇಕು, ನೀರಿನ ಕೊಳವೆ ಮಾರ್ಗದಲ್ಲಿ ಸೋರಿಕೆಯಿದ್ದಲ್ಲಿ ತಕ್ಷಣವೇ ದುರಸ್ತಿಪಡಿಸಬೇಕು. ನೀರಿನ ಟ್ಯಾಂಕ್ ತುಂಬಿ ಹೆಚ್ಚುವರಿ ನೀರು ಪೋಲಾಗುವುದನ್ನು ತಡೆಯಬೇಕು ಎಂದರು.
ಅಧಿಕಾರಿ, ಸಿಬ್ಬಂದಿ ನಿರ್ಲಕ್ಷತೆಯಿಂದ ನೀರು ಪೋಲಾದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತುಮಕೂರು: ಕೆರೆಯಿಂದ ಮಣ್ಣು ತೆಗೆದರೆ ವಾಹನ ಜಪ್ತಿ: ಸಿಇಒ ಎಚ್ಚರಿಕೆ
ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ನೀರೊದಗಿಸಲು ಹೊಸ ಕೊಳವೆ ಬಾವಿಗಳನ್ನು ಕೊರೆಸಲು ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ಮೂರು ತಿಂಗಳಿನಿಂದ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲು ಪುನರಾವರ್ತಿತವಾಗಿ ಸೂಚನೆ ನೀಡಿದ್ದರೂ ಪ್ರಯೋಜನವಾಗಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಪಡೆದು ಪೂರೈಕೆ ಮಾಡಲು ಆದ್ಯತೆ ನೀಡಬೇಕು. ನಂತರ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಮುಂದಾಗಬೇಕು. 25ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಜನ ವಸತಿಗಳಿರುವ ಪ್ರದೇಶಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಸೂಚನೆ ನೀಡಿದರು.

ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ

About The Author

You May Also Like

More From Author

+ There are no comments

Add yours