ವ್ಯಕ್ತಿ ನಾಪತ್ತೆ: ದೂರು ದಾಖಲು
Tumkurnews
ತುಮಕೂರು: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಮಲ್ಲಸಂದ್ರ ಗ್ರಾಮದ ಸುಮಾರು 50 ವರ್ಷದ ವೆಂಕಟೇಶ್ ಎಂಬ ವ್ಯಕ್ತಿಯು ತನ್ನ ಮನೆಯಿಂದ ಏಪ್ರಿಲ್ 4ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ತಮ್ಮ ವೆಂಕಟೇಶ್ವರ ಪ್ರೈಸಸ್ ಜೆರಾಕ್ಸ್ ಅಂಗಡಿ ಕೆಲಸ ನಿರ್ವಹಿಸಲು ಹೋಗುತ್ತೇನೆ ಎಂದು ಹೇಳಿ ಹೋದವನು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ ಎಂದು ಈತನ ಪತ್ನಿ ಲಕ್ಷ್ಮೀ ಠಾಣೆಗೆ ದೂರು ನೀಡಿದ್ದಾರೆ.
ಈತನು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು,
ಈತನ ಬಗ್ಗೆ ಸುಳಿವು ಸಿಕ್ಕವರು ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.
ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
+ There are no comments
Add yours