ತುಮಕೂರು: ಜಿಲ್ಲೆಯ 257 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ಸರ್ಕಾರಕ್ಕೆ ಜಿಲ್ಲಾಧಿಕಾರಿ ಮಾಹಿತಿ
Tumkurnews
ತುಮಕೂರು: ಜಿಲ್ಲೆಯಲ್ಲಿ ಈವರೆಗೂ 257 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಈ ಪೈಕಿ 123 ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಅನಿರ್ಬಂಧಿತ ಅನುದಾನ ಬಳಸಿ ಹೊಸದಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
ವಿಕಾಸ ಸೌಧದಿಂದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿಗಳು ಜಿಲ್ಲೆಯ ವಾಸ್ತವಿಕ ಪರಿಸ್ಥಿತಿಯ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಬರನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ 24 ತಾಲೂಕು ಮಟ್ಟದ ಸಭೆ ಹಾಗೂ 3 ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸಿ ಅಧಿಕಾರಿಗಳಿಗೆ ಬರ ನಿರ್ವಹಣೆ ಬಗ್ಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.
ತುಮಕೂರು: ರೈತರಿಂದ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ ಆದೇಶ
ತುರ್ತು ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು ಎಲ್ಲಾ ತಾಲೂಕುಗಳಿಗೂ ಸರ್ಕಾರದಿಂದ ತಲಾ 85 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ ಶೇ. 40ರಷ್ಟು ಹಣವನ್ನು ಕುಡಿಯುವ ನೀರಿನ ಕಾಮಗಾರಿಗಳಿಗೆ ಖರ್ಚು ಮಾಡಲಾಗಿದೆ ಎಂದು ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಇರುವ 83 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದ್ದು, ಈವರೆಗೆ ಖಾಸಗಿ ಕೊಳವೆ ಬಾವಿಗಳ ಮಾಲೀಕರಿಗೆ 9,51,000 ರೂ.ಗಳನ್ನು ಪಾವತಿ ಮಾಡಲಾಗಿದೆ. ಪ್ರಸ್ತುತ 25 ಗ್ರಾಮಗಳಲ್ಲಿ ಪಂಚಾಯತಿಯಿಂದ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಸರ್ಕಾರದ ನಿರ್ದೇಶನದನ್ವಯ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ಈವರೆಗೂ 1.06 ಕೋಟಿ ರೂ. ವೆಚ್ಚದಲ್ಲಿ 171 ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಈವರೆಗೆ 10 ಮೇವು ಬ್ಯಾಂಕುಗಳನ್ನು ತೆರೆದು ಜಾನುವಾರುಗಳಿಗೆ ಮೇವು ವಿತರಿಸಲಾಗುತ್ತಿದೆ. ನೀರಿನ ಸೌಲಭ್ಯದೊಂದಿಗೆ ಜಮೀನು ಹೊಂದಿರುವ ರೈತರಿಗೆ ಮೇವಿನ ಬೆಳೆ ಬೆಳೆಯಲು 1,62,300 ಮಿನಿ ಕಿಟ್‍ಗಳನ್ನು ವಿತರಿಸಲಾಗಿದೆ. ಜಮೀನು ರಹಿತರ ಜಾನುವಾರುಗಳಿಗೆ ಈವರೆಗೂ 1,037 ಟನ್ ಮೇವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ತುಮಕೂರು: ಸಾಲಬಾಧೆ: ಒಂದೇ ಗ್ರಾಮದ ಮೂವರು ಮಹಿಳೆಯರು ಆತ್ಮಹತ್ಯೆ
ನಗರ ಪ್ರದೇಶಗಳಲ್ಲಿರುವ ನೀರಿನ ಸಮಸ್ಯೆ ಚಿತ್ರಣವನ್ನು ಬಿಡಿಸಿ ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿಗಳಾದ ಗೌರವ ಕುಮಾರ್ ಶೆಟ್ಟಿ, ಸಪ್ತಶ್ರೀ, ಗೋಟೂರು ಶಿವಪ್ಪ, ತಹಶಿಲ್ದಾರ್ ಎಂ. ಸಿದ್ದೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.
ತುಮಕೂರು: ಸಾಲ ಪಡೆದು ವಂಚನೆ: ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
+ There are no comments
Add yours