ತುಮಕೂರು: ಶಿಕ್ಷಕರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮತಯಾಚನೆ

1 min read

ಶಿಕ್ಷಕರು ಸ್ವಾಭಿಮಾನದಿಂದ ತಲೆ ಎತ್ತಿ ಬಾಳುವಂತೆ ಮಾಡಿದ್ದೇನೆ: ವೈ.ಎ ನಾರಾಯಣ ಸ್ವಾಮಿ

ಶಿಕ್ಷಕರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮತಯಾಚನೆ

Tumkurnews
ತುಮಕೂರು: ಶಿಕ್ಷಣ ಇಲಾಖೆಯ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಪ್ರಯತ್ನ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ ನಾರಾಯಣಸ್ವಾಮಿ ಹೇಳಿದರು.
ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಿ ಅವರು ಮಾತನಾಡಿದರು.

ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
ಶಿಕ್ಷಣ ಕ್ಷೇತ್ರದ ಭ್ರಷ್ಟಾಚಾರ ನಿರ್ಮೂಲನೆ ಮಾಡಲು, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಏಳನೇ ವೇತನ ಜಾರಿಗೆ, ಹಳೆ ಪೆನ್ಷನ್ ಪದ್ದತಿ ಜಾರಿಗೆ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
ಕಳೆದ 20 ವರ್ಷಗಳಿಂದ ತಾನು ಶಿಕ್ಷಕರ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದು, ಶಿಕ್ಷಕರಿಗೆ ದೊರೆಯಬೇಕಾದ ಸವಲತ್ತುಗಳನ್ನು ಸಮಯಾನುಸಾರ ಕೊಡಿಸುವ ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಿದ್ದೇನೆ, ಶಿಕ್ಷಕರು ಸ್ವಾಭಿಮಾನದಿಂದ ತಲೆ ಎತ್ತಿ ಗೌರವದಿಂದ ಬಾಳುವಂತಹ ವ್ಯವಸ್ಥೆ ನಿರ್ಮಾಣ ಮಾಡಿದ ವಿಶ್ವಾಸ ತಮಗಿದೆ ಎಂದರು.

ತುಮಕೂರು: ರೈತರಿಂದ ಸಾಲ ವಸೂಲಾತಿಗೆ ತಡೆ: ಜಿಲ್ಲಾಧಿಕಾರಿ ಆದೇಶ
ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದೆ, ಜಾತಿ, ಮತ ಬೇಧವಿಲ್ಲದಂತೆ ಕೆಲಸ ಮಾಡಿದ್ದೇನೆ. ಈ ಬಾರಿಯೂ ತನಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ನಾರಾಯಣಸ್ವಾಮಿ ಮನವಿ ಮಾಡಿದರು.
ನಗರದ ವಿಶ್ವ ವಿದ್ಯಾಲಯ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್, ವಿದ್ಯಾವಾಹಿನಿ, ಕಾಲೇಜು, ಶ್ರೀದೇವಿ ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಆಕ್ಷಯ, ಅಶ್ವಿನಿ ಸಂಸ್ಥೆಗಳ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿದ ನಾರಾಯಣಸ್ವಾಮಿ ತಮಗೆ ಮತ ನೀಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡುವಂತೆ ಕೋರಿದರು.
ಈ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್, ಆಗ್ನೇಯ ಪದವಿಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ಮೊದಲಾದವರು ಭಾಗವಹಿಸಿದ್ದರು.

ಎಸ್ಸೆಸ್ಸೆಲ್ಸಿ: ಉಡುಪಿ ಜಿಲ್ಲೆ ಪ್ರಥಮ: ಇಲ್ಲಿದೆ ಜಿಲ್ಲಾವಾರು ಫಲಿತಾಂಶ

About The Author

You May Also Like

More From Author

+ There are no comments

Add yours