https://chat.whatsapp.com/Haj1IrKLgZpAIglCBfQbtB" alt="" width="397" height="133" />
ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ
Tumkurnews
ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್’ನನ್ನು ಬಂಧಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಆರೋಪದ ಮೇಲೆ ಟ್ರೋಲ್ ಪೇಜ್ ಅಡ್ಮಿನ್ ಆಗಿರುವ ಪ್ರಜ್ವಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್’ನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ ಬುಕ್, ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದನು ಎನ್ನಲಾಗಿದೆ.
ಈ ಬಗ್ಗೆ ಟ್ರೋಲ್ ಪೇಜ್ ಅಡ್ಮಿನ್ ಪ್ರಜ್ವಲ್ ವಿರುದ್ಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
(ಚಿತ್ರ: ಸಂಸದ ಪ್ರಜ್ವಲ್ ರೇವಣ್ಣ)
+ There are no comments
Add yours