ಬರಗಾಲದಿಂದ ನಷ್ಟ: 16 ಲಕ್ಷ ಕುಟುಂಬಗಳಿಗೆ ತಲಾ 3 ಸಾವಿರ ರೂ. ಪರಿಹಾರ: ಸಿದ್ದರಾಮಯ್ಯ

1 min read

 

ಬರಗಾಲದಿಂದ ಆಗಿರುವ ನಷ್ಟಕ್ಕೆ 3 ಸಾವಿರ ರೂ. ಪರಿಹಾರ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

Tumkurnews
ಬೆಂಗಳೂರು: ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರು: ಕಾರ್ಯಾರಂಭಕ್ಕೂ ಮುನ್ನವೇ ಹೊಸ ಬಸ್ ನಿಲ್ದಾಣದಲ್ಲಿ ಬಿರುಕು! ಅರೆಬರೆ ಆರಂಭಕ್ಕೆ ಸಿದ್ಧತೆ
ಹಲವು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ. ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3,000 ರೂ. ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ.
ನೀರು ಮತ್ತು ಮೇವಿನ ನಿರ್ವಹಣೆಗಾಗಿ ಇಲ್ಲಿಯವರೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಿದೆ ಹಾಗೂ 462 ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್‌ ಸಭೆಗಳನ್ನು ನಡೆಸಿದೆ. ನೀರಿನ ಸಮಸ್ಯೆಯಿರುವ 270 ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 594 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ.

ತುಮಕೂರು: ಸಾಲ ವಸೂಲಿಗೆ ಕಿರುಕುಳ ನೀಡಿದರೆ ಈ ನಂಬರ್’ಗೆ ಕಾಲ್ ಮಾಡಿ: ಎಸ್.ಪಿ
153 ನಗರ ಪ್ರದೇಶದ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ಮತ್ತು 35 ವಾರ್ಡ್‌ಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ.
ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‌ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಭರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್’ಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಇಟಿ ಗೊಂದಲದ ಹಿಂದೆ ಟ್ಯೂಷನ್ ಮಾಫಿಯಾ!: ರಾಜ್ಯ ಪಾಲರ ಅಂಗಳದಲ್ಲಿ ಕೆಇಎ ಕರ್ಮಕಾಂಡ

About The Author

You May Also Like

More From Author

+ There are no comments

Add yours