ಎಕ್ಸ್ ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆ ಮಾಗಡಿಗೆ ನೀರು: ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ವಿರೋಧ
ಸರ್ಕಾರ ಕ್ರಮ ವಹಿಸದಿದ್ದರೆ, ಮೇ 16ರಿಂದ ಕೆನಾಲ್ ಮುಚ್ಚಿ ಬೃಹತ್ ಹೋರಾಟಕ್ಕೆ ಸಜ್ಜು
Tumkurnews
ತುಮಕೂರು: ಜಿಲ್ಲೆಗೆ ಮಂಜೂರಾಗಿರುವ 24.08 ಟಿಎಂಸಿ ಹೇಮಾವತಿ ನೀರಿನಲ್ಲಿಯೇ ಎಕ್ಸ್ ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆ ಮಾಗಡಿ ತಾಲೂಕಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮೇ 15ರೊಳಗೆ ಯೋಜನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಹೋರಾಟಗಾರರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ತುಮಕೂರು: ಶಿರಾ ಗೇಟ್ ರಸ್ತೆ ಬಂದ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
ಮೇ 16ರಿಂದ ತುಮಕೂರು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ರೈತ ಸಂಘಟನೆಗಳು, ಮಠಾಧೀಶರುಗಳ ಪಕ್ಷಾತೀತವಾಗಿ ಎಕ್ಸ್ ಪ್ರೆಸ್ ಕೆನಾಲ್ ಮುಚ್ಚುವ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಸಕರಾದ ಎಂ.ಟಿ.ಕೃಷ್ಣಪ್ಪ, ಬಿ.ಸುರೇಶ್‌ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಎಚ್.ನಿಂಗಪ್ಪ, ಸೇರಿದಂತೆ ಹಲವು ಮುಖಂಡರು ಪಕ್ಷಾತೀತವಾಗಿ ಒತ್ತಾಯಿಸಿದ್ದಾರೆ.
ಹೇಮಾವತಿ ಜಲಾಶಯದಿಂದ ಕುಣಿಗಲ್ ತಾಲೂಕಿಗೆ 3 ಟಿ.ಎಂ.ಸಿ ನೀರು ಹಂಚಿಕೆಯಾಗಿದ್ದು, ನಾಲೆಯ 0-241 ಕಿ.ಮಿ.ವರೆಗೆ ನೀರು ತೆಗೆದುಕೊಂಡು ಹೋಗಲು ಸುಮಾರು 751 ಕೋಟಿ ರೂಗಳನ್ನು ಖರ್ಚು ಮಾಡಿ 72-241ರವರೆಗೆ ನಾಲೆಯ ಅಧುನೀಕರಣ ಕಾಮಗಾರಿ ಸಹ ಚಾಲ್ತಿಯಲ್ಲಿದೆ. ಇದರಿಂದ ತುಮಕೂರು ಜಿಲ್ಲೆಗೆ ಅನ್ಯಾಯವಾಗಲಿದೆ ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.
ತುಮಕೂರು: ಕೊನೆ ದಿನ ಭರ್ಜರಿ ಸುರಿದ ಭರಣಿ ಮಳೆ: ಕೃಪೆ ತೋರುವೆಯಾ ಕೃತ್ತಿಕಾ?
ಕೆನಾಲ್ ಕಾಮಗಾರಿ ಸ್ಥಗಿತಗೊಳಿಸುವ ಬಗ್ಗೆ ಸರ್ಕಾರ ಕೂಡಲೇ ಕ್ರಮ ವಹಿಸಬೇಕು, ಇಲ್ಲವಾದಲ್ಲಿ ಮೇ 16ರಿಂದ ಎಕ್ಸ್’ಪ್ರೆಸ್ ಲಿಂಕ್ ಕೆನಾಲ್ ಮುಚ್ಚುವ ಬೃಹತ್ ಹೋರಾಟ ನಡೆಸಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.
+ There are no comments
Add yours