ಸರ್ಕಾರ ಪತನ ಹೇಳಿಕೆ: ಬಿಜೆಪಿಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ

1 min read

 

ರಾಜ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ, ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ: ಸಿದ್ದರಾಮಯ್ಯ

Tumkurnews
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೌಂಟರ್ ‌ನೀಡಿದ್ದಾರೆ.
ರಾಜ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ, ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ.

ಸತೀಶ್ ಜಾರಕಿಹೊಳಿ, ಪರಮೇಶ್ವರ್, ಸಿದ್ದರಾಮಯ್ಯ ಎಲ್ಲರೂ ಸೇರಿಕೊಂಡು ಡಿಕೆ ಸುರೇಶನ್ನ ಸೋಲಿಸ್ತಾರೆ; ಸರ್ಕಾರ ಬೀಳುತ್ತೆ
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ.
ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ.

ಎಸ್ಸೆಸ್ಸೆಲ್ಸಿ ಟಾಪರ್ಸ್’ಗೆ ಸನ್ಮಾನ, ಹಣಕಾಸಿನ ನೆರವು ನೀಡಿದ ಡಿ.ಕೆ‌ ಶಿವಕುಮಾರ್

About The Author

You May Also Like

More From Author

+ There are no comments

Add yours