ಎಸ್ಸೆಸ್ಸೆಲ್ಸಿ ಟಾಪರ್ಸ್’ಗೆ ಸನ್ಮಾನ, ಹಣಕಾಸಿನ ನೆರವು ನೀಡಿದ ಡಿ.ಕೆ ಶಿವಕುಮಾರ್
Tumkurnews
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್ ಅವರನ್ನು ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಸನ್ಮಾನಿಸಿದರು.
ಇದೇ ವೇಳೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್ ವಿತರಿಸಿದರು. ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
+ There are no comments
Add yours