ಜಿಲ್ಲೆಯ ಜನರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು: ಎಕ್ಸ್‌ಪ್ರೆಸ್‌ ಕೆನಾಲ್ ಹೋರಾಟಕ್ಕೆ ಕರೆ

1 min read

 

ಜಿಲ್ಲೆಯ ಜನರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು: ಎಕ್ಸ್‌ಪ್ರೆಸ್‌ ಕೆನಾಲ್ ಹೋರಾಟಕ್ಕೆ ಕರೆ

Tumkurnews
ತುಮಕೂರು: ಹೇಮಾವತಿ ನಾಲೆಯನ್ನು ಡೈವರ್ಟ್ ಮಾಡಿ ರಾಮನಗರ ಜಿಲ್ಲೆಯ ಮಾಗಡಿ ಮತ್ತಿತರರ ಕಡೆಗಳಿಗೆ ನೀರು ತೆಗೆದುಕೊಂಡು ಹೋಗುವ ಎಕ್ಸ್’ಪ್ರೆಸ್ ಲಿಂಕ್ ಕೆನಾಲ್‍ನಿಂದ ಇಡೀ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು, ಜನರು ಪಕ್ಷಾತೀತವಾಗಿ ಮೇ16 ರಂದು ನಡೆಯುವ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮಾಜಿ ಶಾಸಕ ಹೆಚ್.ನಿಂಗಪ್ಪ ಮನವಿ ಮಾಡಿದರು.

ಎಕ್ಸ್’ಪ್ರೆಸ್ ಕೆನಾಲ್ ಮೂಲಕ ಮಾಗಡಿಗೆ ಹೇಮಾವತಿ ನೀರು: ವಿವಿಧ ಸಂಘಟನೆಗಳಿಂದ ಹೋರಾಟಕ್ಕೆ ಬೆಂಬಲ
ನಗರದ ಖಾಸಗಿ ಹೊಟೇಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,10 ಅಡಿ ವ್ಯಾಸದ ಕೊಳವೆ ಮೂಲಕ ಗ್ರಾವಿಟಿಯಲ್ಲಿ ನೀರು ತೆಗೆದುಕೊಂಡು ಹೋಗಲು ಕಾಮಗಾರಿ ನಡೆಯುತ್ತಿದೆ. ಈ ಯೋಜನೆ ಜಾರಿಗೆ ಬಂದರೆ, ನಾಲಾ ವಲಯದ ಇತರೆ ತಾಲೂಕುಗಳಿಗೆ ಕುಡಿಯುವ ನೀರು ಇಲ್ಲದಂತಾಗುತ್ತದೆ. ಹಾಗಾಗಿ ನಮ್ಮ ನೀರು, ನಮ್ಮ ಹಕ್ಕು ಎಂಬ ಭಾವನೆಯಿಂದ ಜಿಲ್ಲೆಯ ಜನರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.
ಮಾಗಡಿ ತಾಲೂಕಿನ ಶ್ರೀರಂಗ ಏತ ನೀರಾವರಿಗೆ ಸೋರ್ಸ್ ಆಗಿ ಕುಣಿಗಲ್ ತಾಲೂಕಿಗೆ ಹಂಚಿಕೆಯಾಗಿರುವ 3 ಟಿ.ಎಂ.ಸಿ ಹೇಮಾವತಿ ನೀರನ್ನು ಬಳಕೆ ಮಾಡಲು ರಾಜಕೀಯ ದುರುದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ. ಹೇಮಾವತಿ ನಾಲೆಯ 70 ಕಿ.ಮಿ.ಯಿಂದ ಡಿ.ರಾಮಪುರದಿಂದ ನಾಲೆಯನ್ನು ಡೈವರ್ಟ್ ಮಾಡಿ ಕುಣಿಗಲ್ ಬಳಿ ಇರುವ ನಾರನಹಳ್ಳಿ ಬಳಿ ಹಾಲಿ ನಾಲಾ 197 ಕಿ.ಮಿ.ಗೆ ಸೇರಿಸುವ ಸುಮಾರು 35 ಕಿ.ಮಿ.ಯೋಜನೆ ಇದಾಗಿದ್ದು, ಈಗಾಗಲೇ ಸರಕಾರಿ ಭೂಮಿಯಲ್ಲಿ ಪೈಫ್‍ಲೈನ್ ಅಳವಡಿಸಲು ಕಾಮಗಾರಿ ಆರಂಭವಾಗಿದೆ. ಇದರಿಂದ ಗುಬ್ಬಿ,ಮಧುಗಿರಿ, ಕೊರಟಗೆರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ ತಾಲೂಕುಗಳಲ್ಲದೆ, ಸುಮಾರು 27 ಏತ ನೀರಾವರಿ ಯೋಜನೆಗಳಿಗೆ ನೀರಿನ ಕೊರತೆ ಉಂಟಾಗಲಿದೆ. ಈಗಲೇ ತಡೆಯದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ನಾವುಗಳೇ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.

ಎಕ್ಸ್ ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ಹೇಮಾವತಿ ನೀರು: ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ವಿರೋಧ
ಎಕ್ಸ್‌ಪ್ರೆಸ್‌ ಕೆನಾಲ್ ಮೂಲಕ ಮಾಗಡಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಕಾಮಗಾರಿಯನ್ನು ರದ್ದುಪಡಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ನಿರ್ಣಯ ಕೈಗೊಂಡು ಸರಕಾರಕ್ಕೆ ಕಳುಹಿಸಲಾಗಿದೆ. ಅಲ್ಲದೆ ಸದನದಲ್ಲಿ ಜಿಲ್ಲೆಯ ಇಬ್ಬರು ಶಾಸಕರು ಎಕ್ಸ್‌ಪ್ರೆಸ್ ಕೆನಾಲ್‍ಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿದ್ದಾರೆ. ಅಲ್ಲದೆ ಜಿಲ್ಲೆಯ ಶಾಸಕರಾದ ಎಂ.ಟಿ.ಕೃಷ್ಣಪ್ಪ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಅವರುಗಳು ಮತ್ತೊಮ್ಮೆ ಜಿಲ್ಲೆಯ ಮಂತ್ರಿಗಳು ಮತ್ತು ಸರಕಾರದ ಮುಖ್ಯ ಕಾರ್ಯದರ್ಶಿ ಅವರುಗಳನ್ನು ಭೇಟಿ ಮಾಡಿ, ಇರುವ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಿದ್ದರೂ ನೀತಿ ಸಂಹಿತೆ ಜಾರಿ ಇರುವುದನ್ನು ನೆಪ ಮಾಡಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಇದಕ್ಕೆ ಇಡೀ ಜಿಲ್ಲೆಯಾದ್ಯಂತ ಜನರು ವಿರೋಧ ವ್ಯಕ್ತಪಡಿಸುತಿದ್ದು, ಸರಕಾರ ಯೋಜನೆಯನ್ನು ರದ್ದು ಪಡಿಸದಿದ್ದರೆ ಹಂತ ಹಂತವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೆಚ್.ನಿಂಗಪ್ಪ ಎಚ್ಚರಿಸಿದರು.
ಹೇಮಾವತಿ ಯೋಜನೆಯ 72 ಕಿ.ಮಿಯಿಂದ 197 ಕಿ.ಮಿ.ವರೆಗೆ ನಾಲೆಯ ಆಧುನೀಕರಣ ಕಾಮಗಾರಿ ಕೊನೆಯ ಹಂತದಲ್ಲಿದೆ. ಇದಕ್ಕಾಗಿ ಸರಕಾರ ಸುಮಾರು 900 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಇದೇ ನಾಲೆಯ ಮೂಲಕ ಕುಣಿಗಲ್ ಮೂಲಕ ಮಾಗಡಿಗೆ ನೀರು ತೆಗೆದುಕೊಂಡು ಹೋಗಬಹುದು. ಏಕ್ಸ್’ಪ್ರೆಸ್ ಕೆನಾಲ್‍ನ ಅಗತ್ಯವಿಲ್ಲ. ಇದನ್ನು ಸರಕಾರ ಮತ್ತು ಯೋಜನೆಯ ಹಿಂದಿರುವ ಜನಪ್ರತಿನಿಧಿಗಳು ಅರ್ಥ ಮಾಡಿಕೊಂಡು ತುಮಕೂರು ಜಿಲ್ಲೆಯ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಗೂಳೂರು ನವೀನ್‍ಗೌಡ, ನಾಗವಲ್ಲಿ ರಾಮಣ್ಣ, ಹೆಬ್ಬೂರು ಗೋವಿಂದರಾಜು, ಉರ್ಡಿಗೆರೆ ಲಕ್ಷ್ಮಿನಾರಾಯಣ, ಲೋಕೇಶ್, ಗೋವಿಂದಪ್ಪ ಮತ್ತಿತರರು ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours