ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಜಿಲ್ಲೆಗೆ ಮರಣ ಶಾಸನ: ಶಾಸಕ ಜಿ.ಬಿ ಜ್ಯೋತಿಗಣೇಶ್

1 min read

 

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ಜನತೆಗೆ ಮರಣ ಶಾಸನ: ಶಾಸಕ ಜಿ.ಬಿ ಜ್ಯೋತಿಗಣೇಶ್

Tumkurnews
ತುಮಕೂರು: ಜಿಲ್ಲೆಯ ಕುಣಿಗಲ್ ಮೂಲಕ ಮಾಗಡಿ ತಾಲ್ಲೂಕಿಗೆ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೋಗುವ ಕಾಮಗಾರಿಗೆ ನನ್ನ ವಿರೋಧವಿದೆ ಎಂದು ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದ್ದಾರೆ.

ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಮಕೂರು ಜಿಲ್ಲೆಗೆ ನಿಗದಿಯಾಗಿರುವ ಹೇಮಾವತಿ ನೀರಿನ ಪ್ರಮಾಣ 24.08 ಟಿ.ಎಂ.ಸಿ.ಯಾಗಿದ್ದು, ಇಂದಿನವರೆಗೂ ನಮಗೆ ಸಿಗಬೇಕಾದ ಸಂಪೂರ್ಣ ಪಾಲು ಸಿಕ್ಕಿಲ್ಲ ಎಂಬ ಬೇಸರ ನಮಗಿದೆ. 2019ರಲ್ಲಿ ಕುಣಿಗಲ್ ಮೂಲಕ ಮಾಗಡಿ ತಾಲ್ಲೂಕಿಗೆ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಯನ್ನು ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ತಡೆ ನೀಡಿ, ಹೇಮಾವತಿ ನಾಲಾ ಆಧುನೀಕರಣ ಯೋಜನೆಗೆ ಟಿ.ಬಿ.ಸಿ. 0 ಕಿಮೀ ಯಿಂದ 70 ನೇ ಕಿಮೀ ವರೆಗೂ ಹಾಗೂ 71 ಕಿಮೀ ಯಿಂದ 165 ಕಿಮೀ ವರೆಗೂ ಸಾವಿರಾರು ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದರು.

ಎಕ್ಸ್ ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ಹೇಮಾವತಿ ನೀರು: ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ವಿರೋಧ
ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರ ಅಧಿಕಾರದ ಅವಧಿಯಲ್ಲಿ ಹೇಮಾವತಿ ನಾಲಾ ಅಧುನಿಕರಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ಕಾಮಗಾರಿಯು ಭಾಗಶಃ ಪೂರ್ಣಗೊಂಡಿದೆ.
ಅದರೆ ಈ ಹೇಮಾವತಿ ನಾಲಾ ಅಧುನಿಕರಣ ಕಾಮಗಾರಿಯು ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಅನವಶ್ಯಕವಾಗಿ ಸಾವಿರಾರು ಕೋಟಿ ವೆಚ್ಚದಲ್ಲಿ 34 ಕಿಮೀ ಉದ್ದದ ಎಕ್ಸ್‌ಪ್ರೆಸ್ ಕೆನಾಲ್ ಪೈಪ್ ಲೈನ್ ಅನ್ನು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಉದ್ದೇಶವು ದುರುದ್ದೇಶದಿಂದ ಕೂಡಿದೆ. ಈ ಯೋಜನೆಯು ತುಮಕೂರು ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ರೈತರಿಗೆ ಮರಣ ಶಾಸನವಾಗಲಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯ ಕಾಮಗಾರಿಯನ್ನು ಕೈಗೊಳ್ಳಲು ನಾವು ಬಿಡುವುದಿಲ್ಲ ಎಂದು‌ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಟಾಪರ್ಸ್’ಗೆ ಸನ್ಮಾನ, ಹಣಕಾಸಿನ ನೆರವು ನೀಡಿದ ಡಿ.ಕೆ‌ ಶಿವಕುಮಾರ್
ತುಮಕೂರು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ, ಮಾಜಿ ಜನಪ್ರತಿನಿಧಿಗಳ ಹಾಗೂ ವಿವಿಧ ಸಂಘಟನೆಗಳ, ಹೋರಾಟಗಾರರ ಹಾಗೂ ನಾಗರೀಕ ವೇದಿಕೆಗಳ ಪಕ್ಷಾತೀತ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ದ ಧ್ವನಿಯಾಗುವುದು ನಮ್ಮ ಕರ್ತವ್ಯವಾಗಿರುತ್ತದೆ. ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ನನ್ನ ವಿರೋಧವಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಮಕೂರು: ಶಿಕ್ಷಕರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮತಯಾಚನೆ

About The Author

You May Also Like

More From Author

+ There are no comments

Add yours