ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ: ಡಿ.ಕೆ ಶಿವಕುಮಾರ್ ಅಣಕು ಶವಯಾತ್ರೆ
ತುಮಕೂರು ಬಂದ್ ನಡೆಸಿ ಪ್ರತಿಭಟನೆ: ಕನ್ನಡ ಸೇನೆ
Tumkurnews
ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ಹೋರಾಟ ಆರಂಭವಾಗಿದ್ದು, ಮೇ 16ರಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅಣಕು ಶವಯಾತ್ರೆಗೆ ಹೋರಾಟಗಾರರು ಸಿದ್ಧತೆ ನಡೆಸಿದ್ದಾರೆ.
ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಗುಬ್ಬಿ ತಾಲ್ಲೂಕು ಡಿ.ರಾಂಪುರದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕೆಲಸ ನಡೆಯುತ್ತಿರುವ ಸ್ಥಳದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳು, ರೈತಪರ ಸಂಘಟನೆಗಳ ಮುಖಂಡರು ಮೇ 16ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಜಿಲ್ಲೆಗೆ ಮರಣ ಶಾಸನ: ಶಾಸಕ ಜಿ.ಬಿ ಜ್ಯೋತಿಗಣೇಶ್
ಪ್ರತಿಭಟನೆ ಅಂಗವಾಗಿ ತುಮಕೂರು ನಗರದ ಬಿಜಿಎಸ್ ವೃತ್ತದಲ್ಲಿ(ಟೌನ್ ಹಾಲ್) ಗುರುವಾರ ಬೆಳಿಗ್ಗೆ 9 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಣುಕು ಶವಯಾತ್ರೆ ನಡೆಸಲಾಗುವುದು. ಬಳಿಕ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಲು ಒತ್ತಾಯಿಸಿಲಾಗುತ್ತದೆ. ನಂತರ ಡಿ.ರಾಂಪುರ ಬಳಿ ಪ್ರತಿಭಟನೆಗೆ ತೆರಳಲಾಗುವುದು. ಸಂಘಟನೆಗಳ ಮುಖಂಡರು, ರೈತರು, ಮಠಾಧೀಶರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಜನರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು: ಎಕ್ಸ್‌ಪ್ರೆಸ್ ಕೆನಾಲ್ ಹೋರಾಟಕ್ಕೆ ಕರೆ
ತುಮಕೂರು ಬಂದ್ ಎಚ್ಚರಿಕೆ:
ಜಿಲ್ಲೆಯ ಜಲಮೂಲವಾದ ಹೇಮಾವತಿ ನಾಲೆಯಿಂದ ನೀರನ್ನು ಮಾಗಡಿ ತಾಲ್ಲೂಕಿಗೆ ತೆಗೆದುಕೊಂಡು ಹೋದರೆ ಇಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. ಈ ಕಾಮಗಾರಿಯನ್ನು ಸ್ಥಗಿತಗೊಳಿಸಲೇಬೇಕು ಎಂದು ಆಗ್ರಹಿಸಿ ಹೋರಾಟ ಮಾಡಲಾಗುತ್ತಿದೆ. ಒಂದು ವೇಳೆ ಕಾಮಗಾರಿ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ, ತುಮಕೂರು ಬಂದ್ ಆಚರಿಸಿ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ಧನಿಯಾ ಕುಮಾರ್ ಎಚ್ಚರಿಸಿದ್ದಾರೆ.
ತುಮಕೂರು: ಕಾರ್ಯಾರಂಭಕ್ಕೂ ಮುನ್ನವೇ ಹೊಸ ಬಸ್ ನಿಲ್ದಾಣದಲ್ಲಿ ಬಿರುಕು! ಅರೆಬರೆ ಆರಂಭಕ್ಕೆ ಸಿದ್ಧತೆ
ಪೈಪ್‍ಲೈನ್ ಮೂಲಕ ಮಾಗಡಿ, ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವುದರಿಂದ ಜಿಲ್ಲೆಯ ಜನರಿಗೆ ಕುಡಿಯುವ ನೀರು ಸಿಗದೆ ಅನ್ಯಾಯವಾಗುತ್ತದೆ. ಜಿಲ್ಲೆಗೆ ಹೇಮಾವತಿಯಿಂದ 24.5 ಟಿಎಂಸಿ ನೀರು ಹಂಚಿಕೆ ಮಾಡಿರುವಷ್ಟನ್ನೂ ಬಳಸಿಕೊಳ್ಳಲು ಆಗದಿರುವ ಪರಿಸ್ಥಿತಿಯಲ್ಲಿ ಮಾಗಡಿ ತಾಲ್ಲೂಕಿಗೆ ನೀರು ತೆಗೆದುಕೊಂಡು ಹೋಗುತ್ತಿರುವುದು ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ತೊಂದರೆ ಆಗುತ್ತದೆ. ಸರ್ಕಾರ ಕೂಡಲೇ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಧನಿಯಾಕುಮಾರ್ ಒತ್ತಾಯಿಸಿದ್ದಾರೆ.
ಎಕ್ಸ್ ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ಹೇಮಾವತಿ ನೀರು: ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ವಿರೋಧ
+ There are no comments
Add yours