ಪಾವಗಡ: ಕೈ‌ ಹಿಡಿದ ಕೃತಿಕಾ ಮಳೆ: ಬಿತ್ತನೆ ಬೀಜ ವಿತರಣೆಗೆ ಚಾಲನೆ

1 min read

ರೈತರಿಗೆ ಸಹಾಯಧನದಡಿ ಬಿತ್ತನೆ ಬೀಜ ವಿತರಣೆ

Tumkurnews
ತುಮಕೂರು: ಪಾವಗಡ ತಾಲ್ಲೂಕು ಕೃಷಿ ಇಲಾಖೆಯಿಂದ ಪಾವಗಡ, ನಾಗಲಮಡಿಕೆ, ವೈ.ಎನ್.ಹೊಸಕೋಟಿ ಮತ್ತು ಮಂಗಳವಾಡದಲ್ಲಿರುವ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಬಿತ್ತನೆಗೆ ಅಗತ್ಯವಿರುವ ಸುಧಾರಿತ ತಳಿಗಳ ಬಿತ್ತನೆ ಬೀಜಗಳನ್ನು ರೈತರಿಗೆ ಸಹಾಯಧನದಡಿ ವಿತರಿಸಲಾಗುತ್ತಿದೆ ಎಂದು ಪಾವಗಡ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ತುಮಕೂರು: ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ಎಷ್ಟು? ಇಲ್ಲಿದೆ ಕೃಷಿ ಇಲಾಖೆ ಮಾಹಿತಿ
ಪಾವಗಡ ತಾಲ್ಲೂಕಿನಲ್ಲಿ ಕಳೆದ ವರ್ಷ ಮಳೆ ಇಲ್ಲದೆ ಮುಂಗಾರು, ಹಿಂಗಾರು ಎರಡು ಬೆಳೆ ಇಲ್ಲದೆ ಕಂಗಾಲಾಗಿದ್ದ  ರೈತರಿಗೆ ಕಳೆದ 3-4 ದಿನಗಳಿಂದ ಸುರಿದಿರುವ ಕೃತಿಕ ಮಳೆಯು ಮತ್ತೆ ಕೃಷಿಯಡೆ ಮುಖ ಮಾಡುವಂತೆ ಮಾಡಿದ್ದು, 2024ರ ಪೂರ್ವ ಮುಂಗಾರಿನಲ್ಲಿ ವಾಡಿಕೆ ಮಳೆ 50.1 ಮೀ.ಮೀ ಎದುರಾಗಿ ಕಳೆದ ಮೂರು ದಿನಗಳ ಅವಧಿಯಲ್ಲಿ ತಾಲ್ಲೂಕಿನಾದ್ಯಂದ 47.6 ಮೀ.ಮೀ ಮಳೆಯಾಗಿದ್ದು, ತಾಲ್ಲೂಕಿನಲ್ಲಿ ರೈತ ಭಾಂಧವರು ಪೂರ್ವ ಮುಂಗಾರು ಬೆಳೆಗಳ ಬಿತ್ತನೆಗೆ ಭೂಮಿಯನ್ನು ಸಿದ್ಧಪಡಿಸುತ್ತಿರುವುದು ಪ್ರಾರಂಭವಾಗಿದೆ.

ತುಮಕೂರು ಜಿಲ್ಲೆಯಲ್ಲಿ ಉತ್ತಮ ಮಳೆ: ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದ ಜಿಲ್ಲಾಡಳಿತ
ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ರಸಗೊಬ್ಬರ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರಸಗೊಬ್ಬರಗಳಾದ ಯುರಿಯಾ-424 ಮೆ.ಟನ್. ಡಿ.ಎ.ಪಿ-59 ಮೇ.ಟನ್, ಎಂ.ಓ.ಪಿ-38 ಮೆ.ಟನ್, ಹಾಗೂ ಕಾಂಪ್ಲೆಕ್ಸ್ ಗೊಬ್ಬರ-244 ಮೆ.ಟನ್‍ಗಳಷ್ಟು ದಾಸ್ತಾನು ಇದ್ದು ಪ್ರಸಕ್ತ ಹಂಗಾಮಿಗೆ ರಸಗೊಬ್ಬರದ ಕೊರತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

About The Author

You May Also Like

More From Author

+ There are no comments

Add yours