ತುಮಕೂರು: ಕಾಂಗ್ರೆಸ್ ಪಕ್ಷದಿಂದ ಹಾಲೆನೂರು ಲೇಪಾಕ್ಷರನ್ನು ವಜಾಗೊಳಿಸಿ: ಒತ್ತಾಯ

1 min read

 

ಕಾಂಗ್ರೆಸ್ ಪಕ್ಷದಿಂದ ಹಾಲೆನೂರು ಲೇಪಾಕ್ಷರನ್ನು ವಜಾಗೊಳಿಸಲು ಒತ್ತಾಯ

Tumkurnews
ತುಮಕೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದು, ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಾಲೆನೂರು ಲೇಪಾಕ್ಷ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ದ ಕೆಲಸ ಮಾಡುತ್ತಿದ್ದು, ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೈಯದ್ ಸದಾತ್, ಕಾರ್ಯಕರ್ತರಾದ ರಘುಕುಮಾರ್, ಹರ್ಷವರ್ಧನ್ ಒತ್ತಾಯಿಸಿದ್ದಾರೆ.

ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಡಿ.ಟಿ‌ ಶ್ರೀನಿವಾಸ್ ಬೆಂಬಲಿಸಿ: ರಮೇಶ್ ಬಾಬು ಮನವಿ
ನಗರದಲ್ಲಿ ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಒಂದು ತತ್ವ, ಸಿದ್ದಾಂತದ ಮೇಲೆ ನಡೆದುಕೊಂಡು ಬಂದಿರುವ ಪಕ್ಷ. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷಕ್ಕೆ ಹೆಚ್ಚು ಬೆಲೆಯಿದೆ. ಆದರೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಬಂದಂತಹ ಕೆಲವರು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ಪಾಲಿಸದೆ, ಹಳೆಯ ಪಕ್ಷದ ರೀತಿಯಲ್ಲಿ ವ್ಯಕ್ತಿ ಪೂಜೆಗೆ ಮುಂದಾಗಿದ್ದಾರೆ. ಇದರಿಂದ ಮೂಲ ಕಾಂಗ್ರೆಸಿಗರು ಮುಜುಗರ ಅನುಭವಿಸುವಂತಾಗಿದೆ. ಹಾಗಾಗಿ ಪಕ್ಷದ ಮುಖಂಡರು ಮತ್ತು ರಾಜ್ಯ ಮಟ್ಟದ ನಾಯಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಹಾಲೇನೂರು ಲೇಪಾಕ್ಷ ಅವರನ್ನು ಪಕ್ಷದಿಂದ ಹಾಗೂ ಬೆಳ್ಳಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿಸಿ ನಾಳೆ ಡಿ.ಕೆ ಶಿವಕುಮಾರ್ ಅಣಕು ಶವಯಾತ್ರೆ, ತುಮಕೂರು ಬಂದ್: ಖಡಕ್ ವಾರ್ನಿಂಗ್
ಕಾಂಗ್ರೆಸ್ ಪಕ್ಷ ಈಗಾಗಲೇ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಡಿ.ಟಿ. ಶ್ರೀನಿವಾಸ್ ಅವರನ್ನು ಘೋಷಿಸಿದೆ. ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರ ಜೊತೆಗೆ ಚುನಾವಣೆಗೆ ನಾಮಪತ್ರವನ್ನು ಸಹ ಸಲ್ಲಿಸಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಆದರೆ ಬ್ಲಾಕ್‍ ಅಧ್ಯಕ್ಷರಾಗಿರುವ ಹಾಲೆನೂರು ಲೇಪಾಕ್ಷ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರ ಪರ ಕೆಲಸ ಮಾಡುವ ಬದಲು, ಪಕ್ಷೇತರ ಅಭ್ಯರ್ಥಿಯಾಗಿರುವ ಶಿವರಾಜ್ ಎಂಬುವರ ಜೊತೆಗೆ ಇಡೀ ಜಿಲ್ಲೆಯಾದ್ಯಂತ ಓಡಾಟ ನಡೆಸಿ, ಶಿಕ್ಷಕರಿಂದ ಮತಯಾಚಿಸುತ್ತಿದ್ದಾರೆ. ಇದು ಪಕ್ಷವಿರೋಧಿ ಚಟುವಟಿಕೆಯಾಗಿದೆ. ಹಾಗಾಗಿ ಅವರನ್ನು ಪಕ್ಷದಿಂದ ಕೈಬಿಡಬೇಕು ಎಂಬುದು ನಮ್ಮಂತಹ ನಿಷ್ಠಾವಂತ ಕಾರ್ಯಕರ್ತರ ಒತ್ತಾಯವಾಗಿದೆ. ಒಂದು ವೇಳೆ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ, ಪಕ್ಷದ ಜಿಲ್ಲಾ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ತುಮಕೂರು: ನಿವೇಶನ ರಹಿತರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಆರ್ಭಟದ ನಡುವೆಯೂ ಕಾಂಗ್ರೆಸ್ ಪಕ್ಷವನ್ನು ನಮ್ಮಂತಹ ಸಾವಿರಾರು ನಿಷ್ಠಾವಂತ ಕಾರ್ಯಕರ್ತರು ಇಂದಿಗೂ ಉಳಿಸಿಕೊಂಡು ಬಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಸೋತ ಗೌರಿಶಂಕರ್ ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದರಿಂದ ಪಕ್ಷಕ್ಕೆ ಬಲ ಬಂದಿದೆ ನಿಜ. ಆದರೆ ಅವರ ಜೊತೆಗೆ ಪಕ್ಷಕ್ಕೆ ಬಂದಿರುವ ಕಾರ್ಯಕರ್ತರು ಇಂದಿಗೂ ಜೆಡಿಎಸ್ ಪಕ್ಷದ ವ್ಯಕ್ತಿ ಪೂಜೆಯಿಂದ ಹೊರ ಬಂದಂತೆ ಕಾಣುತ್ತಿಲ್ಲ. ಇದು ನಮ್ಮಂತಹ ಮೂಲ ಕಾರ್ಯಕರ್ತರಿಗೆ ನೋವುಂಟು ಮಾಡುವ ವಿಚಾರವಾಗಿದೆ ಎಂದರು.

ಸರ್ಕಾರ ಪತನ ಹೇಳಿಕೆ: ಬಿಜೆಪಿಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ
ಪಕ್ಷದ ಮುಖಂಡರು ಸಹ ಮೂಲ ಕಾರ್ಯಕರ್ತರನ್ನು ಕಡೆಗಣಿಸಿ, ಹೊಸದಾಗಿ ಪಕ್ಷ ಸೇರಿದವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಂತಹ ಹುದ್ದೆ ನೀಡಿ, ಕಾರ್ಯಕರ್ತರಿಗೆ ನೋವುಂಟು ಮಾಡಿದರೂ ಸಹಿಸಿಕೊಂಡು ಪಕ್ಷದ ಹಿತದೃಷ್ಟಿಯಿಂದ ಸುಮ್ಮನಿದ್ದೆವು. ಆದರೆ ಪಕ್ಷ ವಿರೋಧಿ ಚಟುವಟಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಡಿ.ಸಿ.ಗೌರಿಶಂಕರ್ ಅವರು ಸಹ ಇದನ್ನು ತಮ್ಮ ಹಿಂಬಾಲಕರಿಗೆ ಮನವರಿಕೆ ಮಾಡಿಕೊಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಬಂದ ನಂತರ, ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ತುಮಕೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸತ್ತುಹೋಗಿದೆ: ನಾಲಾಯಕ್ ಶಿಕ್ಷಣ ಮಂತ್ರಿ

About The Author

You May Also Like

More From Author

+ There are no comments

Add yours