ಸಿಇಟಿ ಪರೀಕ್ಷೆಯಲ್ಲಿ ಪ್ರಮಾದ: ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರ ತಲೆದಂಡ
Tumkurnews
ಬೆಂಗಳೂರು: ಸಿಇಟಿ ಸಂತ್ರಸ್ತರಿಗೆ ಇದು ಅಲ್ಪ ಸಮಾಧಾನ ನೀಡುವ ಸುದ್ದಿ! ಹೌದು, ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರ ತಲೆದಂಡ ಮಾಡಿದೆ.
ಪರೀಕ್ಷೆಯಲ್ಲಾಗಿರುವ ಪ್ರಮಾದಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರ ತಲೆದಂಡವಾಗಿದೆ. ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಮ್ಯಾ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್.ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶಿಸಿದೆ.
ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ವಿವಾದಕ್ಕೆ ಕಾರಣವಾಗಿತ್ತು. ಕೇವಲ ಪ್ರಶ್ನೆ ಪತ್ರಿಕೆಯಲ್ಲಿ ಮಾತ್ರ ಲೋಪವಲ್ಲದೇ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿಯೂ ಸಹ ಕೆ.ಇ.ಎ ಬೇಜವಾಬ್ದಾರಿ ಕಂಡು ಬಂದಿತ್ತು. ವಿದ್ಯಾರ್ಥಿಗಳಿಗೆ ದೂರದ ಊರುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ರಮ್ಯಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಇದು ಸರ್ಕಾರಕ್ಕೆ ತೀವ್ರ ಮುಜಗರಕ್ಕೆ ಕಾರಣವಾಗಿತ್ತು.
ಇದೀಗ ಅಂತಿಮವಾಗಿ ರಾಜ್ಯ ಸರ್ಕಾರ ಇಂದು (ಮೇ 16) ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿದ್ದು, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿದ್ದ ಎಚ್. ಪ್ರಸನ್ನ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
+ There are no comments
Add yours