ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ: ಸಿಎಂ ಸಿದ್ದರಾಮಯ್ಯ

1 min read

 

ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ: ಸಿಎಂ ಸಿದ್ದರಾಮಯ್ಯ

Tumkurnews
ಬೆಂಗಳೂರು: ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.
ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

You May Also Like

More From Author

+ There are no comments

Add yours