ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್’ಗೆ ವಿರೋಧ: ಡಿ.ಕೆ ಶಿವಕುಮಾರ್ ಅಣಕು ಶವಯಾತ್ರೆ

1 min read

 

  • ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅಣಕು ಶವಯಾತ್ರೆ ನಡೆಸಿದರು.

Tumkurnews
ತುಮಕೂರು: ಹೇಮಾವತಿ ಎಕ್ಸ್’ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಟೌನ್‍ಹಾಲ್ ವೃತ್ತದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅಣಕು ಶವಯಾತ್ರೆ ನಡೆಸಿದರು.

ಎಕ್ಸ್’ಪ್ರೆಸ್ ಕೆನಾಲ್ ಮೂಲಕ ಮಾಗಡಿಗೆ ಹೇಮಾವತಿ ನೀರು: ವಿವಿಧ ಸಂಘಟನೆಗಳಿಂದ ಹೋರಾಟಕ್ಕೆ ಬೆಂಬಲ
ನಗರದ ಟೌನ್‍ಹಾಲ್ ವೃತ್ತದಲ್ಲಿ ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷ ಧನಿಯಾಕುಮಾರ್ ನೇತೃತ್ವದಲ್ಲಿ ಸಮಾವೇಶಗೊಂಡ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಣಕು ಶವಯಾತ್ರೆ ನಡೆಸಿ ಮಾಗಡಿ ತಾಲ್ಲೂಕಿಗೆ ಹೇಮಾವತಿ ನೀರು ಕೊಂಡೊಯ್ಯುವ ಸಲುವಾಗಿ ಕೈಗೊಂಡಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಸರ್ಕಾರ ಕೈ ಬಿಡುಬೇಕು. ರಕ್ತ ಕೊಟ್ಟೇವು ಯಾವುದೇ ಕಾರಣಕ್ಕೂ ಒಂದು ಹನಿ ನೀರನ್ನು ಸಹ ಬಿಡೆವು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಕುಮಾರ್, ಜಿಲ್ಲೆಯ ಜಲಮೂಲವಾದ ಹೇಮಾವತಿ ನಾಲೆಯಿಂದ ನೀರನ್ನು ಮಾಗಡಿ, ರಾಮನಗರ, ಕನಕಪುರ ತಾಲ್ಲೂಕಿಗೆ ತೆಗೆದುಕೊಂಡು ಹೋದರೆ ಇಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. ಈ ಕಾಮಗಾರಿ ಸ್ಥಗಿತಗೊಳಿಸಲೇಬೇಕು ಎಂದು ಆಗ್ರಹಿಸಿದರು.

About The Author

You May Also Like

More From Author

+ There are no comments

Add yours