ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿಸಿ ತುಮಕೂರಿನಲ್ಲಿ ಪಕ್ಷಾತೀತ ಹೋರಾಟ: ಬೃಹತ್ ಪ್ರತಿಭಟನೆ
Tumkurnews
ತುಮಕೂರು: ಜಿಲ್ಲೆಯ ಕುಡಿಯುವ ನೀರಿನ ಜೀವನಾಡಿಯಾಗಿರುವ ಹೇಮಾವತಿ ನಾಲೆಗೆ ಪ್ರತ್ಯೇಕ ಎಕ್ಸ್’ಪ್ರೆಸ್ ಲಿಂಕ್ ಕೆನಾಲ್ ಮೂಲಕ ಮಾಗಡಿಗೆ ನೀರು ಕೊಂಡೊಯ್ಯಲು ಕೈಗೊಂಡಿರುವ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಗುಬ್ಬಿ ತಾಲೂಕಿನ ಡಿ.ರಾಂಪುರದ ಹೇಮಾವತಿ ಶಾಖಾ ನಾಲೆ ಬಳಿ ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ನೂರಾರು ರೈತರು, ವಿವಿಧ ಮಠಾಧೀಶರು, ವಿವಿಧ ರಾಜಕೀಯ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪಕ್ಷಾತೀತವಾಗಿ ಗುರುವಾರ ನಾಲೆಗೆ ಮೂರು ಹಿಡಿ ಮಣ್ಣು ಹಾಕುವ ಮೂಲಕ ಪ್ರತಿಭಟನೆ ನಡೆಸಿದರು.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್’ಗೆ ವಿರೋಧ: ಡಿ.ಕೆ ಶಿವಕುಮಾರ್ ಅಣಕು ಶವಯಾತ್ರೆ
ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಸುರೇಶ್‍ಗೌಡ, ಜ್ಯೋತಿಗಣೇಶ್, ಮಾಜಿ ಶಾಸಕರಾದ ಮಸಾಲೆ ಜಯರಾಮ್, ಹೆಚ್.ನಿಂಗಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಸೇರಿದಂತೆ ಇನ್ನಿತರೆ ಮುಖಂಡರ ನೇತೃತ್ವದಲ್ಲಿ ಹೇಮಾವತಿ ಶಾಖಾ ನಾಲೆಯ 70ನೇ ಕಿ.ಮೀ.ಸ್ಥಳವಾದ ಡಿ. ರಾಂಪುರದ ಬಳಿ ತುರುವೇಕೆರೆ, ತಿಪಟೂರು, ಗುಬ್ಬಿ, ತುಮಕೂರು ಗ್ರಾಮಾಂತರ, ತುಮಕೂರು ನಗರದ ನೂರಾರು ಸಂಖ್ಯೆಯಲ್ಲಿ ರೈತರು, ಹೋರಾಟಗಾರರು ಜಮಾಯಿಸಿ ಪ್ರತಿಭಟಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಜಿಲ್ಲೆಗೆ ಮರಣ ಶಾಸನ: ಶಾಸಕ ಜಿ.ಬಿ ಜ್ಯೋತಿಗಣೇಶ್
ನಮ್ಮ ನೀರು, ನಮ್ಮ ಹಕ್ಕು ಹೋರಾಟದ ಕುರಿತು ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಪೈಪ್‍ಲೈನ್ ಮೂಲಕ ಮಾಗಡಿ, ರಾಮನಗರಕ್ಕೆ (843.71 ಎಂಸಿಎಫ್‍ಟಿ) ನೀರು ತೆಗೆದುಕೊಂಡು ಹೋಗುವುದರಿಂದ ಜಿಲ್ಲೆಯ ಜನರಿಗೆ ತೀವ್ರ ಅನ್ಯಾಯವಾಗುತ್ತದೆ. ಇಲ್ಲಿನ ಜನರಿಗೆ ಕುಡಿಯುವ ನೀರು ಸಿಗದಂತಾಗುತ್ತದೆ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೇಮಾವತಿ ನೀರನ್ನು ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದರು.
ಹೇಮಾವತಿಯಿಂದ ಜಿಲ್ಲೆಗೆ 24.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ.ಹಂಚಿಕೆ ಮಾಡಿರುವಷ್ಟು ನೀರು ಜಿಲ್ಲೆಗೆ ಯಾವ ವರ್ಷವೂ ಹರಿದು ಬಂದಿಲ್ಲ. ಜಿಲ್ಲೆಗೆ ಹಂಚಿಕೆ ಮಾಡಿರುವ ನೀರಿನಲ್ಲೇ ಮಾಗಡಿ ತಾಲೂಕಿಗೆ ನೀರು ತೆಗೆದುಕೊಂಡು ಹೋಗಲಾಗುತ್ತಿದೆ. ಜಿಲ್ಲೆಯಲ್ಲಿ 23 ಕುಡಿಯುವ ನೀರಿನ ಯೋಜನೆಗಳು ಜಾರಿಯಲ್ಲಿದ್ದು, ಮಾಗಡಿ ಭಾಗಕ್ಕೆ ನೀರು ಹರಿಸಿದರೆ ಜನರಿಗೆ ಕುಡಿಯುವ ನೀರು ಸಿಗದಾಗುತ್ತದೆ. ಈ ಯೋಜನೆ ಜಾರಿಯಾದರೆ ತುಮಕೂರು ಜಿಲ್ಲೆಗೆ ಮರಣ ಶಾಸನವಾಗಲಿದೆ ಎಂದರು.
ಎಕ್ಸ್ ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ಹೇಮಾವತಿ ನೀರು: ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ವಿರೋಧ
+ There are no comments
Add yours