ತುಮಕೂರು: 6ನೇ ತರಗತಿ ಪ್ರವೇಶಕ್ಕಾಗಿ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

6ನೇ ತರಗತಿ ಪ್ರವೇಶಕ್ಕಾಗಿ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Tumkurnews
ತುಮಕೂರು: ಸಮಾಜ ಕಲ್ಯಾಣ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರತಿಷ್ಟಿತ ಶಾಲೆಗಳ 6ನೇ ತರಗತಿ ಪ್ರವೇಶಾತಿ ಕಲ್ಪಿಸಲು ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕುಟುಂಬದ ಆದಾಯ ಮಿತಿ 2.50 ಲಕ್ಷ ರೂ.ಗಳ ಒಳಗಿರಬೇಕು ಹಾಗೂ 5ನೇ ತರಗತಿಯಲ್ಲಿ ಶೇ.60 ಅಂಕ ಪಡೆದಿರಬೇಕು.
ಪ್ರವೇಶಾತಿ ಕಲ್ಪಿಸುವಾಗ ಬಡತನ ರೇಖೆಗಿಂತ ಕೆಳಗಿನ ಮಟ್ಟದ, ಅತಿ ಹಿಂದುಳಿದ ವರ್ಗದ ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿ, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ವಿಶೇಷ ಚೇತನರು, ಕೋವಿಡ್-19 ಮುಂತಾದ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡವರ, ಸಿಂಗಲ್ ಫ್ಯಾಮಿಲಿ, ಯೋಜನಾ ನಿರಾಶ್ರಿತರ, ಮಾಜಿ ಸೈನಿಕರ, ಕೊಳಗೇರಿಗಳಲ್ಲಿ ವಾಸಿಸುತ್ತಿರುವವರ, ಕೃಷಿ ಕಾರ್ಮಿಕರ, ಸಾಲ ಬಾಧೆಯಿಂದ ಆತ್ಮಹತ್ಯೆಗೆ ಗುರಿಯಾದವರ, ದೌರ್ಜನ್ಯದಲ್ಲಿ ನೊಂದವರ, ಜೀತ ವಿಮುಕ್ತ ಮಕ್ಕಳು ಹಾಗೂ ದೇವದಾಸಿಯರ ಮಕ್ಕಳಿಗೆ ಮೊದಲನೇ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಜಾಲತಾಣ sw.kar.nic.in ಮೂಲಕ ಮೇ 21ರೊಳಗಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿಯೊಂದಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಮೇ 21ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours