ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಏನಂದ್ರು?

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಏನಂದ್ರು?

Tumkurnews
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಮೊದಲಿನಿಂದಲೂ ನನ್ನ ವಿರೋಧವಿದೆ. ಹಾಗಂತ ಇವರು ಯಾರೋ ಮಾಡುವ ಹೋರಾಟಕ್ಕೆ ಬೆಂಬಲ ಸೂಚಿಸುವುದಿಲ್ಲ. ಬದಲಾಗಿ ಅಗತ್ಯ ಬಿದ್ದರೆ ಪ್ರತ್ಯೇಕವಾಗಿ ಹೋರಾಟ ಮಾಡುತ್ತೇನೆ ಎಂದು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ತಿಳಿಸಿದರು.
ಜಿಲ್ಲೆಯ ಜನರು, ರೈತರ ಹಿತ ಕಾಯುವುದು ನಮ್ಮೆಲ್ಲರ ಕರ್ತವ್ಯ. ಮುಖ್ಯಮಂತ್ರಿಗಳು ಸಭೆ ಕರೆದು ಚರ್ಚಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಆ ಕೆಲಸ ಆಗದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದರು.

ಗುಬ್ಬಿಯಲ್ಲಿ ಭರ್ಜರಿ ಮಳೆ: ಕೆರೆಯಂತಾದ ಬಸ್ ನಿಲ್ದಾಣ: ವಿಡಿಯೋ
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸರ್ಕಾರದ ಭಾಗವಾಗಿರುವುದರಿಂದ ಈ ರೀತಿಯ ಕ್ರಮಗಳು ಕೈಗೊಂಡರೆ ಮುಜುಗರವಾಗುತ್ತದೆ. ಹಾಗಾಗಿ ಮೊದಲು ಸಭೆ ಕರೆದು ಕುಣಿಗಲ್‍ಗೆ 3 ಟಿಎಂಸಿ ನೀರು ಅಲೋಕೇಷನ್ ಆಗಿರುವ ಬಗ್ಗೆ ಜಿಲ್ಲೆಯ ರೈತರಿಗೆ ಮನವರಿಕೆ ಮಾಡಬೇಕು ಎಂದು ಹೇಳಿದ್ದೇವೆ. ಇದಕ್ಕೆ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಸಭೆ ಕರೆದು ಚರ್ಚಿಸುವುದಾಗಿ ಹೇಳಿದ್ದಾರೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಕಾಮಗಾರಿ ನಿಲ್ಲಿಸುವಂತೆಯೂ ತಿಳಿಸಲಾಗಿದೆ ಎಂದರು.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ಜನರ ವಿರೋಧ: ಪರಮೇಶ್ವರ್ ಏನಂದ್ರು‌?
ನಾನು ಯಾರಿಗೋ ಹೆದರಿಕೊಂಡು, ಯಾರನ್ನೋ ಮೆಚ್ಚಿಸುವ ಸಲುವಾಗಿ ಕೆಲಸ ಮಾಡುವವನಲ್ಲ. ನಾನು ಏನು ಎನ್ನುವುದು ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪರವರಿಗೂ ಗೊತ್ತಿದೆ. ವಿನಾಕಾರಣ ನನ್ನ ಬಗ್ಗೆ ಎಲ್ಲೆಂದರಲ್ಲಿ ಮಾತನಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಾನು ಹೇಮಾವತಿ ಚಾನಲ್ ಮೇಲೆ ಓಡಾಡಿಕೊಂಡು ಗುಬ್ಬಿ ತಾಲ್ಲೂಕಿಗೆ ಹೇಮಾವತಿ ನೀರು ಬಿಡಿಸಿದ ವ್ಯಕ್ತಿ. ನಮ್ಮ ತಾಲ್ಲೂಕಿನ ರೈತರ ಹಿತವನ್ನು ಯಾವ ರೀತಿ ಕಾಯಬೇಕು ಎಂಬುದು ನನಗೆ ಗೊತ್ತಿದೆ.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ಗೆ ವಿರೋಧದ ಕಹಳೆ: ತುಮಕೂರಿನಲ್ಲಿ ಹೋರಾಟ ಆರಂಭ
ಕುಣಿಗಲ್‍ಗೆ 3 ಟಿಎಂಸಿ ನೀರು ಅಲೋಕೇಷನ್ ಆಗಿದೆ ಎಂದು ಅವರು ಹೇಳುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ನಮ್ಮ ಜಿಲ್ಲೆಯ ರೈತರು, ಜನಸಾಮಾನ್ಯರ ಸಭೆ ಕರೆದು ಮನವರಿಕೆ ಮಾಡಿಕೊಡಬೇಕು. ಮೊದಲ ಈ ಕೆಲಸ ಆಗಬೇಕಾಗಿದೆ ಎಂದರು.

About The Author

You May Also Like

More From Author

+ There are no comments

Add yours