ಬಿಜೆಪಿಯವರನ್ನು ಕೇಳಿಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮಾಡಲ್ಲ: ಪರಂ ಫುಲ್ ಗರಂ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಡಾ.ಜಿ ಪರಮೇಶ್ವರ್

Www.tumkurnews.in
ತುಮಕೂರು: ರಾಜ್ಯದಲ್ಲಿ ಬಿಜೆಪಿಯವರು ಹೇಳುವಂತೆ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ಶಾಂತಿ ನೆಮ್ಮದಿಯಿಂದ ಇರಲು ಏನು ಕ್ರಮ ಬೇಕಾದರೂ ತೆಗೆದುಕೊಳ್ಳುತ್ತೇವೆ. ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದರು.
ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಒಂದೊಂದು ಘಟನೆಗೂ ಒಂದೊಂದು ಕಾರಣ ಇರುತ್ತದೆ. ಎಲ್ಲದರ ಬಗ್ಗೆಯೂ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿಯವರ ಕಾಲದಲ್ಲಿ ಎಷ್ಟು ಕೊಲೆಗಳು ಆಗಿದ್ದವು ಎಂಬ ಬಗ್ಗೆ ಅಂಕಿ ಅಂಶ ಸಹಿತ ಹೇಳುತ್ತೇನೆ. ಆಗ ಯಾರ ಅಧಿಕಾರದ ಅವಧಿಯಲ್ಲಿ ರಾಜ್ಯ ಸುರಕ್ಷಿತವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಸಮರ್ಥಿಸಿಕೊಂಡರು.
ಇನ್ನು ನಾಲ್ಕು ವರ್ಷ ಬಿಜೆಪಿಯವರು ರಾಜೀನಾಮೆ ಕೇಳುತ್ತಿರಬೇಕು. ಅವರಿಗೆ ನಮ್ಮ ರಾಜೀನಾಮೆ ಕೇಳುವುದೇ ಕೆಲಸ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ಜನರ ವಿರೋಧ: ಪರಮೇಶ್ವರ್ ಏನಂದ್ರು‌?

ತುಮಕೂರು: ಧಾರಾಕಾರವಾಗಿ ಸುರಿದ ಮಳೆ: ವಿಡಿಯೋ

About The Author

You May Also Like

More From Author

+ There are no comments

Add yours