ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ಜನರ ವಿರೋಧ: ಪರಮೇಶ್ವರ್ ಏನಂದ್ರು‌?

1 min read

 

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ರೈತರ ವಿರೋಧ: ಪರಮೇಶ್ವರ್ ಏನಂದ್ರು‌ ಗೊತ್ತೇ?

Www.tumkurnews.in
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯಿಂದ ಜಿಲ್ಲೆಗೆ ಏನೆಲ್ಲಾ ತೊಂದರೆಯಾಗುತ್ತದೆ ಎಂಬುದರ ಬಗ್ಗೆ ನಾನು ಮತ್ತು ಸಚಿವ ರಾಜಣ್ಣನವರು ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದೇವೆ, ಆದರೆ ಸಂಪುಟ ನಮ್ಮೊಬ್ಬರದ್ದೇ ಅಲ್ಲವಲ್ಲ ಎಂದರು.

ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್’ಗೆ ವಿರೋಧದ ಕಹಳೆ: ತುಮಕೂರಿನಲ್ಲಿ ಹೋರಾಟ ಆರಂಭ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟದಲ್ಲಿ ವಿಷಯ ಪ್ರಸ್ತಾಪವಾಗಿ ಈ ಲಿಂಕ್ ಕೆನಾಲ್ ಮಾಡಬಹುದು ಎಂದು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದು ಸರ್ಕಾರದ ತೀರ್ಮಾನ, ನನ್ನ ತೀರ್ಮಾನವಲ್ಲ ಎಂದು ಸ್ಪಷ್ಟಪಡಿಸಿದರು.
ತುಮಕೂರು ಜಿಲ್ಲೆಗೆ ಕುಡಿಯುವ ನೀರು ಮತ್ತು ಸೆಮಿಡ್ರೈಪ್ ನಾಲೆಯಲ್ಲಿ ಹೇಮಾವತಿ ಡ್ಯಾಮ್‍ನಿಂದ 25 ಟಿಎಂಸಿ ನೀರು ಕೊಟ್ಟಿದ್ದಾರೆ. ಆದರೆ ಹಾಸನ ಜಿಲ್ಲೆಯಿಂದ 18 ರಿಂದ 19 ಟಿಎಂಸಿ ನೀರು ನಮ್ಮ ಜಿಲ್ಲೆಗೆ ಇದುವರೆಗೂ ಬಂದಿಲ್ಲ. ಸುಮಾರು 14 ರಿಂದ 15 ಟಿಎಂಸಿ ನೀರು ಬಂದಿರಬಹುದು ಅಷ್ಟೇ ಎಂದು ತಿಳಿಸಿದರು.

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್’ಗೆ ವಿರೋಧ: ಡಿ.ಕೆ ಶಿವಕುಮಾರ್ ಅಣಕು ಶವಯಾತ್ರೆ
ಗುಬ್ಬಿ ತಾಲ್ಲೂಕು, ತುರುವೇಕೆರೆ, ತಿಪಟೂರಿಗೆ ಕುಡಿಯುವ ನೀರಿಗೆ ಹಂಚಿಕೆಯಾಗಿದೆ. ಇಲ್ಲಿಂದ ಮುಂದೆ ಕುಣಿಗಲ್ ಕೆರೆಗೂ ಹೋಗಲು ಅವಕಾಶ ಮಾಡಿಕೊಡಲಾಗಿದೆ. ಮಧ್ಯದಲ್ಲಿ ಹೆಬ್ಬೂರಿಗೂ ಏತನೀರಾವರಿ ಮೂಲಕ ನೀರು ಹರಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಗುಬ್ಬಿ ತಾಲ್ಲೂಕಿನ ಡಿ. ರಾಂಪುರದ ಬಳಿ ಇರುವ 70ನೇ ಕಿ.ಮೀ.ನಿಂದ ನೇರವಾಗಿ ಕುಣಿಗಲ್‍ಗೆ ನೀರು ತೆಗೆದುಕೊಂಡು ಹೋಗಬೇಕೆಂದು ಕಳೆದ ಐದಾರು ವರ್ಷಗಳಿಂದ ಪ್ರಸ್ತಾವನೆ ಇದೆ. ಇದಕ್ಕೆ ಪರ-ವಿರೋಧ ವ್ಯಕ್ತವಾಗಿದೆ. ಈ ಬಾರಿ ಸಂಪುಟದಲ್ಲಿ ವಿಷಯ ಮಂಡಿಸಿ, ಸರ್ಕಾರ ಎಕ್ಸ್‌ಪ್ರೆಸ್ ಕೆನಾಲ್ ಮಾಡಬಹುದು ಎಂದು ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಿದರು.
ಈ ಮಧ್ಯೆ ರೈತರು ಈ ಎಕ್ಸ್‌ಪ್ರೆಸ್ ಕೆನಾಲ್ ಕೆಲಸ ಆಗಬಾರದು ಎಂದು ತಡೆದು ನಿಲ್ಲಿಸಿದ್ದಾರೆ. ತಹಸೀಲ್ದಾರ್’ಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬೇಕಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು, ನೀರಾವರಿ ಸಲಚಿವರು, ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದ ಅವರು, ಕಳೆದ ಜಿ.ಪಂ ಕೆಡಿಪಿ ಸಭೆಯಲ್ಲೂ ಸಹ ಈ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಸ್ಥಗಿತಗೊಳಿಸುವ ಸಂಬಂಧ ನಿರ್ಣಯ ಕೈಗೊಳ್ಳಲಾಗಿತ್ತು. ಸಭೆಯು ತೀರ್ಮಾನ ಮಾಡಿದಂತೆ ನಿರ್ಣಯ ಮಾಡಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದೇವೆ ಎಂದರು.

ಶಿರಾಗೇಟ್‍ನಿಂದ ನಗರ ನಿಲ್ದಾಣಕ್ಕೆ ನೂತನ ಸಾರಿಗೆ ಸೌಲಭ್ಯ ಆರಂಭ: KSRTC DC ಎಸ್.ಚಂದ್ರಶೇಖರ್

About The Author

You May Also Like

More From Author

+ There are no comments

Add yours